Advertisement

Andhra Pradesh: ಬೋಟ್ ತಯಾರಿಕಾ ಘಟಕ ಬೆಂಕಿಗಾಹುತಿ: ಕನಿಷ್ಠ 40 ಬೋಟ್‌ ಭಸ್ಮ

09:16 AM Apr 29, 2023 | Team Udayavani |

ಆಂಧ್ರಪ್ರದೇಶ: ಕಾಕಿನಾಡ ಜಿಲ್ಲೆಯ ಫೈಬರ್ ಬೋಟ್ ತಯಾರಿಕಾ ಕಾರ್ಖಾನೆಯಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಕನಿಷ್ಠ 40 ದೋಣಿಗಳು ಸುಟ್ಟು ಕರಕಲಾದ ಘಟನೆ ಶನಿವಾರ ಸಂಭವಿಸಿದೆ.

Advertisement

ಭಾರಿ ಪ್ರಮಾಣದಲ್ಲಿ ಬೆಂಕಿ ಹೊತ್ತಿಕೊಂಡು ಸ್ಥಳದಲ್ಲಿದ್ದ ಜನರು ಆತಂಕಕ್ಕೀಡಾದರು. ಕೂಡಲೇ ಸ್ಥಳೀಯರು ಅಗ್ನಿಶಾಮಕ ದಳದ ಸಿಬ್ಬಂದಿಗೆ ಮಾಹಿತಿಯನ್ನು ನೀಡಿದ ಕೂಡಲೇ ಸ್ಥಳಕ್ಕೆ ದೌಡಾಯಿಸಿದ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರೂ ಸಹ ಕನಿಷ್ಠ 40 ಬೋಟ್‌ ಸುಟ್ಟು ಭಸ್ಮವಾಗಿವೆ.

ಬೆಂಕಿ ಅನಾಹುತಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲವಾದರೂ, ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಅವಘಡ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.
Advertisement

Udayavani is now on Telegram. Click here to join our channel and stay updated with the latest news.

Next