ಆಂಧ್ರ ಪ್ರದೇಶ : ಕೋವಿಡ್ ಮೂರನೇ ಅಲೆಯನ್ನು ಹಿಮ್ಮೆಟ್ಟಿಸುವ ನಿಟ್ಟಿನಲ್ಲಿ ಆಂಧ್ರ ಪ್ರದೇಶದಲ್ಲಿ ಸದ್ಯ ಜಾರಿ ಇರುವ ನೈಟ್ ಕರ್ಫ್ಯೂವನ್ನು ಆಗಸ್ಟ್ 21 ರವರೆಗೆ ಮುಂದೂಡಲಾಗಿದೆ.
ಭಾನುವಾರ ಈ ಕುರಿತು ಆದೇಶ ಹೊರಡಿಸಿರುವ ರಾಜ್ಯ ಸರ್ಕಾರ, ಆಗಸ್ಟ್ 21ರ ವರೆಗೆ ಪ್ರತಿ ದಿನ ರಾತ್ರಿ 10 ಗಂಟೆಯಿಂದ ಮುಂಜಾನೆ 6ರವರೆಗೆ 144 ಸೆಕ್ಷನ್ ನಡಿ ಕರ್ಫ್ಯೂ ಜಾರಿಯಲ್ಲಿರಲಿದೆ ಎಂದು ಆದೇಶ ಹೊರಡಿಸಿದೆ.
ಇನ್ನು ಮದುವೆ-ಮುಂಜಿ, ಸ್ನೇಹಿತರ ಕಾರ್ಯಕ್ರಮಗಳಲ್ಲಿ 150 ಜನಕ್ಕೆ ಮಾತ್ರ ಅನುಮತಿ ನೀಡಲಾಗಿದೆ. ರಾಜ್ಯದಲ್ಲಿ ಕೋವಿಡ್ ಮಾರ್ಗಸೂಚಿಗಳನ್ನು ತಪ್ಪದೆ ಅನುಸರಿಸಬೇಕೆಂದು ಸೂಚಿಸಲಾಗಿದೆ.
ಇಂದಿನ ಪ್ರಕರಣಗಳ ಸಂಖ್ಯೆ :
ಇನ್ನು ಆಂಧ್ರ ಪ್ರದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಹೊಸದಾಗಿ 1506 ಕೋವಿಡ್ ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. 1835 ಜನರು ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ ಒಟ್ಟು 17865 ಸಕ್ರಿಯ ಪ್ರಕರಣಗಳು ಇವೆ ಎಂದು ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ಅಂಕಿ-ಅಂಶಗಳು ತಿಳಿಸಿವೆ.