ತಿರುಪತಿ: ಜಗತ್ತಿನ ಅತಿ ಶ್ರೀಮಂತ ದೇಗುಲವೆಂದೇ ಪ್ರಸಿದ್ಧಿಯಾಗಿರುವ ತಿರುಮಲದ ಶ್ರೀ ವೆಂಕಟೇಶ್ವರ ದೇವಸ್ಥಾನಕ್ಕೆ 25 ಕೋಟಿ ರೂ.ವೆಚ್ಚದಲ್ಲಿ ಡ್ರೋನ್ ನಿಗ್ರಹ ದಾಳಿ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ.
ಜಮ್ಮು ಮತ್ತು ಕಾಶ್ಮೀರದಲ್ಲಿ ಡ್ರೋನ್ ದಾಳಿ ನಡೆದ ಹಿನ್ನೆಲೆಯಲ್ಲಿ ರಕ್ಷಣಾ ಅಭಿವೃದ್ಧಿ ಸಂಸ್ಥೆ (ಡಿಆರ್‌ಡಿಒ) ಅಭಿವೃದ್ಧಿಪಡಿಸಿದ ಡ್ರೋನ್ ಅನ್ನು ನಿಯೋಜಿಸಲಾಗಿದೆ. ಹೀಗಾಗಿ, ಇಂಥ ರಕ್ಷಣಾ ವ್ಯವಸ್ಥೆ ಪಡೆದ ಮೊದಲ ದೇಗುಲ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.
ನಿಯೋಜನೆ ಮೊದಲು ಕರ್ನಾಟಕದ ಕೋಲಾರದಲ್ಲಿ ಡ್ರೋನ್ ಅನ್ನು ಪರೀಕ್ಷೆಗೆ ಒಳಪಡಿಸಲಾಗಿತ್ತು. ಈ ಸಂದರ್ಭದಲ್ಲಿ ಟಿಟಿಡಿಯ ಜಾಗೃತ ದಳ ಮತ್ತು ಭದ್ರತಾ ವಿಭಾಗದ ಮುಖ್ಯಸ್ಥ ಗೋಪೀನಾಥ ಜತ್ತಿ ಉಪಸ್ಥಿತರಿದ್ದರು.
ಇದನ್ನೂ ಓದಿ :ಆಕಾಶ್ ಕ್ಷಿಪಣಿಯನ್ನು ಮತ್ತೆ ಮರುಪರೀಕ್ಷೆ ನಡೆಸಿದ ಡಿಆರ್‌ಡಿಒ
ಕೇಂದ್ರ ಸರ್ಕಾರಿ ಸ್ವಾಮ್ಯದ ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್‌ನಲ್ಲಿ ಹೊಸ ಮಾದರಿಯ ತಂತ್ರಜ್ಞಾನದ ವ್ಯವಸ್ಥೆಯನ್ನು ಸಿದ್ಧಪಡಿಸಲಾಗಿದೆ. 4 ಕಿಮೀ ದೂರದಿಂದಲೇ ಡ್ರೋನ್ ಬರುವಾಗಲೇ ಅದನ್ನು ಗುರುತಿಸುವ ಸಾಮರ್ಥ್ಯವನ್ನು ಹೊಂದಿದೆ.