ನವದೆಹಲಿ:ದೇಶಾದ್ಯಂತ ಕೋವಿಡ್ ಸೋಂಕು ಪ್ರಕರಣ ಇಳಿಕೆಯಾಗುತ್ತಿರುವ ನಡುವೆ ಆಂಧ್ರಪ್ರದೇಶ ಸರ್ಕಾರ ಜೂನ್ 20ರವರೆಗೆ ಕೋವಿಡ್ ಕರ್ಫ್ಯೂವನ್ನು ಮುಂದುವರಿಸಿರುವುದಾಗಿ ಸೋಮವಾರ (ಜೂನ್ 07) ಘೋಷಿಸಿದೆ.
ಇದನ್ನೂ ಓದಿ:‘ಜೀವನ ಪರ್ಯಂತ ನಿನ್ನನ್ನು ಮಿಸ್ ಮಾಡ್ಕೋತಿನಿ’: ಚಿರು ನೆನೆದು ಭಾವುಕರಾದ ಅರ್ಜುನ್ ಸರ್ಜಾ
ರಾಜ್ಯದಲ್ಲಿನ ಕೋವಿಡ್ ಸೋಂಕು ಪ್ರಕರಣ ಗಮನದಲ್ಲಿರಿಸಿಕೊಂಡು ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ನೇತೃತ್ವದ ಸರ್ಕಾರ ಈ ನಿರ್ಧಾರ ತೆಗೆದುಕೊಂಡಿರುವುದಾಗಿ ತಿಳಿಸಿದೆ. ಆದರೆ ಕೆಲವೊಂದು ನಿರ್ಬಂಧಗಳನ್ನು ಸಡಿಲಿಕೆ ಮಾಡುವುದಾಗಿ ಹೇಳಿದೆ.
ನೂತನ ಮಾರ್ಗಸೂಚಿ ಪ್ರಕಾರ, ಕೋವಿಡ್ ಕರ್ಫ್ಯೂವನ್ನು ಬೆಳಗ್ಗೆ 6ರಿಂದ ಮಧ್ಯಾಹ್ನ 2ಗಂಟೆವರೆಗೆ ಸಡಿಲಿಕೆ ಮಾಡಲಾಗಿದೆ. ಅಲ್ಲದೇ ಸರ್ಕಾರಿ ಕಚೇರಿಗಳು ಬೆಳಗ್ಗೆ 8ರಿಂದ ಮಧ್ಯಾಹ್ನ 2ಗಂಟೆವರೆಗೆ ಕಾರ್ಯನಿರ್ವಹಿಸಲಿದೆ ಎಂದು ವರದಿ ತಿಳಿಸಿದೆ.
ಆಂಧ್ರಪ್ರದೇಶದಲ್ಲಿ ಕೋವಿಡ್ ಕರ್ಫ್ಯೂವನ್ನು ಮೇ 05ರಂದು ಮೊದಲ ಬಾರಿಗೆ ಜಾರಿಗೊಳಿಸಲಾಗಿತ್ತು, ಇದು ಜೂನ್ 10ರಂದು ಮುಕ್ತಾಯಗೊಳ್ಳಲಿದೆ. ಕೋವಿಡ್ ಪರಿಸ್ಥಿತಿ ಕುರಿತು ಉನ್ನತ ಮಟ್ಟದ ಪರಿಶೀಲನಾ ಸಭೆ ನಡೆಸಿದ ನಂತರ ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ಇನ್ನೂ ಕೆಲವು ದಿನಗಳ ಕಾಲ ಕರ್ಫ್ಯೂ ಮುಂದುವರಿಸಲು ನಿರ್ಧರಿಸಿರುವುದಾಗಿ ವರದಿ ವಿವರಿಸಿದೆ.
ಆಂಧ್ರಪ್ರದೇಶದಲ್ಲಿ ಭಾನುವಾರ 8,976 ನೂತನ ಕೋವಿಡ್ ಪ್ರಕರಣಗಳು ವರದಿಯಾಗಿದ್ದು, ಇದರೊಂದಿಗೆ ರಾಜ್ಯದಲ್ಲಿನ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 17,58,339ಕ್ಕೆ ಏರಿಕೆಯಾಗಿದೆ. ಕಳೆದ 24ಗಂಟೆಗಳಲ್ಲಿ 11,466 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 90 ಮಂದಿ ಸಾವನ್ನಪ್ಪಿದ್ದರು ಎಂದು ಆರೋಗ್ಯ ಇಲಾಖೆ ತಿಳಿಸಿದೆ.