ಆಂಧ್ರಪ್ರದೇಶ: ಕಳೆದ ಎರಡು ದಿನಗಳಿಂದ ಆಂಧ್ರಪ್ರದೇಶ, ತೆಲಂಗಾಣದಲ್ಲಿ ವರುಣನ ಅಬ್ಬರ ಜೋರಾಗಿದ್ದು ಮಳೆಯಿಂದ ಇದುವರೆಗೂ ಕನಿಷ್ಠ 19 ಜನರು ಸಾವನ್ನಪ್ಪಿದ್ದಾರೆ ಅಲ್ಲದೆ ವಿವಿಧ ಭಾಗಗಳಿಂದ 17,000 ಕ್ಕೂ ಹೆಚ್ಚು ಜನರನ್ನು ಸ್ಥಳಾಂತರಿಸಲಾಗಿದೆ ಅಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಮಳೆಯಿಂದಾಗಿ ತಗ್ಗು ಪ್ರದೇಶಗಳು ಜಲಾವೃತಗೊಂಡಿದೆ, 140ಕ್ಕೂ ಹೆಚ್ಚು ರೈಲುಗಳ ಸಂಚಾರ ಸ್ಥಗಿತಗೊಳಿಸಲಾಗಿದ್ದು ಜನಜೀವನ ಅಸ್ತವ್ಯಸ್ತಗೊಂಡಿದೆ.
ಹೈದರಾಬಾದ್ ನಲ್ಲೂ ಭಾರೀ ಮಳೆಯಾಗುತ್ತಿದ್ದು, ರಾತ್ರಿಯಿಡೀ ಸುರಿದ ಮಳೆಯಿಂದಾಗಿ ನಗರದ ಹಲವೆಡೆ ಜಲಾವೃತವಾಗಿದೆ. ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 2 ರಂದು ಎಲ್ಲಾ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ಈಗಾಗಲೇ ಪ್ರವಾಹದಲ್ಲಿ ಸಿಲುಕಿದ್ದ ಸಾವಿರಾರು ಮಂದಿಯನ್ನು ರಕ್ಷಣಾ ತಂಡ ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಲಾಗಿದೆ. ಮಳೆಯಿಂದಾಗಿ ರೈಲು ಹಳಿಗಳು ಜಲಾವೃತಗೊಂಡಿದ್ದು ಪರಿಣಾಮ ಹೆಚ್ಚಿನ ರೈಲು ಸಂಚಾರ ರದ್ದುಗೊಂಡಿದೆ.
ಭಾರಿ ಮಳೆಯ ಪರಿಣಾಮ ಆಂದ್ರಪ್ರದೇಶದಲ್ಲಿ ಒಂಬತ್ತು ಮಂದಿ ಮೃತಪಟ್ಟರೆ, ತೆಲಂಗಾಣದಲ್ಲಿ 10 ಮಂದಿ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ. ಆಂಧ್ರದಲ್ಲಿ ಇನ್ನೂ ಮೂರು ಜನರು ಪ್ರವಾಹದಲ್ಲಿ ಕೊಚ್ಚಿಹೋಗಿದ್ದಾರೆ ಎಂದು ಶಂಕಿಸಲಾಗಿದೆ ಇದರ ಜೊತೆಗೆ ತೆಲಂಗಾಣದಲ್ಲಿ ಒಬ್ಬರು ನಾಪತ್ತೆಯಾಗಿದ್ದಾರೆ ಇಂಡಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಮತ್ತು ತೆಲಂಗಾಣದ ರೇವಂತ್ ರೆಡ್ಡಿ ಅವರೊಂದಿಗೆ ಮಾತನಾಡಿದ್ದು ಮತ್ತು ಮಳೆ ಮತ್ತು ಪ್ರವಾಹವನ್ನು ಎದುರಿಸಲು ಕೇಂದ್ರ ಸರ್ಕಾರದಿಂದ ಸಾಧ್ಯವಿರುವ ಎಲ್ಲ ಸಹಾಯವನ್ನು ನೀಡುವ ಭರವಸೆ ನೀಡಿದ್ದಾರೆ.
ಇದನ್ನೂ ಓದಿ: Hearing of cases: ಪೊಲೀಸ್ ಇಲಾಖಾ ವಿಚಾರಣೆ ನಿವೃತ್ತ ನ್ಯಾಯಾಧೀಶರ ಹೆಗಲಿಗೆ!