ಪಡುಬಿದ್ರಿ : ಪಡುಬಿದ್ರಿ ಠಾಣಾ ವ್ಯಾಪ್ತಿಯ ರಾ.ಹೆದ್ದಾರಿಯಲ್ಲಿ ರಾತ್ರಿ ಹೊತ್ತು ಒಬ್ಬಂಟಿಗಳಾಗಿ ನಡೆದುಕೊಂಡು ಹೋಗುತ್ತಿದ್ದ ಆಂಧ್ರದ ನೆಲ್ಲೂರು ನಿವಾಸಿ ಹನು (29) ಎನ್ನುವ ಯುವತಿಯನ್ನು ಸಮಾಜ ಸೇವಕ ವಿಶು ಶೆಟ್ಟಿ ಅಂಬಲಪಾಡಿ ಅವರು ಸ್ಥಳೀಯ ಪೊಲೀಸರ ಸಹಾಯದಿಂದ ರಕ್ಷಿಸಿ ಚಿಕಿತ್ಸೆಗಾಗಿ ಉಡುಪಿಯ ಬಾಳಿಗಾ ಆಸ್ಪತ್ರೆಗೆ ಮಂಗಳವಾರ ದಾಖಲಿಸಿದ್ದಾರೆ.
ಯುವತಿ ಮನೆ ಬಿಟ್ಟು 15 ದಿನಗಳಾಗಿವೆ ಎನ್ನುವ ಮಾಹಿತಿ ನೀಡಿದ್ದು, ಆಕೆಯ ಕೌಟುಂಬಿಕ ಹಿನ್ನೆಲೆಯ ಬಗ್ಗೆ ಹೆಚ್ಚಿನ ವಿವರಗಳು ತಿಳಿದುಬಂದಿಲ್ಲ. ಯುವತಿಯ ವಾರಸುದಾರರು ಇದ್ದಲ್ಲಿ ಪಡುಬಿದ್ರಿ ಪೊಲೀಸ್ ಠಾಣೆಯನ್ನು ಸಂಪರ್ಕಿಸಬಹುದು.
ಇದನ್ನೂ ಓದಿ: ತಾಯಿ ಮೃತಪಟ್ಟ ಕೆಲವೇ ಹೊತ್ತಿನಲ್ಲಿ ಪುತ್ರ ನಿಧನ: ಒಂದೇ ಚಿತೆಯಲ್ಲಿ ಇಬ್ಬರ ಅಂತ್ಯಕ್ರಿಯೆ