ಕೊಲಂಬೊ: ವೆಸ್ಟ್ ಇಂಡೀಸ್ ಸ್ಫೋಟಕ ಬ್ಯಾಟ್ಸ್‌ಮನ್ ಆ್ಯಂಡ್ರೆ ರಸೆಲ್ ಬ್ಯಾಟಿಂಗ್ ಅಬ್ಬರಕ್ಕೆ ಚೆಂಡು ಛಿದ್ರವಾಗಿರುವ ಘಟನೆ ಲಂಕಾ ಪ್ರೀಮಿಯರ್ ಲೀಗ್‌ನಲ್ಲಿ ನಡೆದಿದೆ.
ಶುಕ್ರವಾರ ಹಂಬಂತೋಟದ “ಮಹಿಂದ ರಾಜಪಕ್ಸೆ ಅಂತಾರಾಷ್ಟ್ರೀಯ ಸ್ಟೇಡಿಯಂ’ನಲ್ಲಿ ನಡೆದ ಪಂದ್ಯದಲ್ಲಿ ಜಾಫ್ನಾ ಸ್ಟಾಲಿಯನ್ಸ್ ಮತ್ತು ಕೊಲಂಬೊ ಕಿಂಗ್ಸ್ ತಂಡಗಳು ಮುಖಾಮುಖೀಯಾಗಿದ್ದವು. ಈ ವೇಳೆ ಕೊಲಂಬೊ ಕಿಂಗ್ಸ್‌ನ ರಸೆಲ್ ಬೀಸಿದ ಹೊಡೆತಕ್ಕೆ ಚೆಂಡು ಛಿದ್ರಗೊಂಡಿತು. ಬಳಿಕ ಬದಲಿ ಚೆಂಡಿನೊಂದಿಗೆ ಪಂದ್ಯವನ್ನು ಮುಂದುವರಿಸಲಾಯಿತು.
ಜಾಫ್ನಾ ಸ್ಟಾಲಿಯನ್ಸ್ ವಿರುದ್ಧದ ಪಂದ್ಯದಲ್ಲಿ ರಸೆಲ್ 20 ಎಸೆತಗಳಲ್ಲಿ 32 ರನ್ ಬಾರಿಸಿದರು. ಈ ಸ್ಪೋಟಕ ಇನ್ನಿಂಗ್ಸ್ ನಲ್ಲಿ ರಸೆಲ್ ಎರಡು ಬೌಂಡರಿ ಮತ್ತು ಮೂರು ಸಿಕ್ಸರ್ ಬಾರಿಸಿದ್ದರು.
ಇದನ್ನೂ ಓದಿ:ಟಿ20: ಸರಣಿ ಗೆಲುವಿನತ್ತ ಭಾರತದ ದಿಟ್ಟ ಹೆಜ್ಜೆ
ಈ ಬಾರಿಯ ಐಪಿಎಲ್ ನಲ್ಲಿ ಸಂಪೂರ್ಣ ವಿಫಲರಾಗಿದ್ದ ಆಂಡ್ರೆ ರಸೆಲ್, ಸದ್ಯ ನಡೆಯುತ್ತಿರುವ ಲಂಕಾ ಪ್ರೀಮಿಯರ್ ಲೀಗ್ ನಲ್ಲಿ ಅಬ್ಬರದ ಬ್ಯಾಟಿಂಗ್ ಮಾಡುತ್ತಿದ್ದಾರೆ. ವಾರದ ಹಿಂದೆ ಗಾಲೆ ಗ್ಲಾಡಿಯೇಟರ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ರಸೆಲ್ ಕೇವಲ 14 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ್ದರು. ಅಂದಿನ ಪಂದ್ಯದಲ್ಲಿ ವಿಂಡೀಸ್ ದೈತ್ಯ ಕೇವಲ 19 ಎಸೆತಗಳಲ್ಲಿ 65 ರನ್ ಚಚ್ಚಿ ಬಿಸಾಕಿದ್ದರು.