ನಮ್ ಗಣಿ ಬಿಕಾಂ ಪಾಸ್’, “ಗಜಾನನ ಅಂಡ್ ಗ್ಯಾಂಗ್’ ಸಿನಿಮಾಗಳ ಮೂಲಕ ಸ್ಯಾಂಡಲ್ ವುಡ್ ನಲ್ಲಿ ಭರವಸೆ ಮೂಡಿಸಿರುವ ನಿರ್ದೇಶಕ ಅಭಿಷೇಕ್ ಶೆಟ್ಟಿ ಈಗ ಸದ್ದಿಲ್ಲದೆ ಹೊಸ ಸಿನಿಮಾ ಕೆಲಸದಲ್ಲಿ ಬಿಝಿಯಾಗಿದ್ದಾರೆ.
“ಅಕಿರಾ’, “ವಾಸು ನಾನ್ ಪಕ್ಕಾ ಕಮರ್ಶಿಯಲ್’ ಸಿನಿಮಾ ಖ್ಯಾತಿಯ ನಟ ಅನೀಶ್ ಮುಂದಿನ ಸಿನಿಮಾಗೆ ಅಭಿಷೇಕ್ ಶೆಟ್ಟಿ ಆಕ್ಷನ್ ಕಟ್ ಹೇಳುತ್ತಿದ್ದಾರೆ. ನಿರ್ದೇಶಕ ಅಭಿಷೇಕ್ ಶೆಟ್ಟಿ ಕೆಲಸ ನೋಡಿ ಖುಷಿಯಾಗಿರುವ ಅನೀಶ್, ಅಭಿಷೇಕ್ ಶೆಟ್ಟಿ ಜೊತೆ ಸಿನಿಮಾ ಮಾಡಲು ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ.
ಅಭಿಷೇಕ್ ಶೆಟ್ಟಿ ಕಥೆ, ಚಿತ್ರಕಥೆ, ಡೈಲಾಗ್ ಬರೆದು ನಿರ್ದೇಶನ ಮಾಡುತ್ತಿರುವ ಈ ಚಿತ್ರವನ್ನು “ಅಕಿರಾ’ ಸಿನಿಮಾದ ಶ್ರೀಕಾಂತ್ ಪ್ರಸನ್ನ ಹಾಗೂ “ಗುಳ್ಟು’ ಸಿನಿಮಾದ ಖ್ಯಾತಿಯ ಪ್ರಶಾಂತ್ ರೆಡ್ಡಿ ನಿರ್ಮಾಣ ಮಾಡುತ್ತಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯೆ ಮಾತನಾಡುವ ನಿರ್ದೇಶಕ ಅಭಿಷೇಕ್ ಶೆಟ್ಟಿ ರೋಮ್ಯಾಂಟಿಕ್ ಕಾಮಿಡಿ ಸಬ್ಜೆಕ್ಟ್ ಒಳಗೊಂಡ ಈ ಚಿತ್ರದಲ್ಲಿ ಅನೀಶ್ ಹೊಸ ಅವತಾರದಲ್ಲಿ ಕಾಣಸಿಗಲಿದ್ದಾರೆ. ಈವರೆಗೆ ಅನೀಶ್ ಮಾಡಿರುವ ಸಿನಿಮಾಗಳಿಗಿಂತ ಈ ಸಿನಿಮಾ ಖಂಡಿತ ಭಿನ್ನವಾಗಿರುತ್ತೆ. ಸದ್ಯ ಸಿನಿಮಾದ ಪ್ರಿ ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿವೆ ಎಂದಿದ್ದಾರೆ