Advertisement

Kumbhashi ಆನೆಗುಡ್ಡೆ ಶ್ರೀ ವಿನಾಯಕ ದೇಗುಲ:ಬ್ರಹ್ಮ ರಥೋತ್ಸವ

12:40 AM Dec 06, 2024 | Team Udayavani |

ತೆಕ್ಕಟ್ಟೆ: ಪುರಾಣ ಪ್ರಸಿದ್ಧ ಕುಂಭಾಶಿ ಆನೆಗುಡ್ಡೆ ಶ್ರೀ ವಿನಾಯಕ ದೇವರ ಬ್ರಹ್ಮ ರಥೋತ್ಸವ ಮತ್ತು ಅಷ್ಟೋತ್ತರ ಸಹಸ್ರ ನಾಳಿಕೇರ ಗಣಯಾಗವು ಡಿ.5ರಂದು ಸಂಭ್ರಮದಿಂದ ನಡೆಯಿತು.

Advertisement

ಮುಂಜಾನೆಯಿಂದಲೂ ಸಹಸ್ರಾರು ಭಕ್ತರು ಶ್ರೀ ಸನ್ನಿಧಿಗೆಆಗಮಿಸಿದ್ದು, ಸುಮಾರು 30 ಸಾವಿರಕ್ಕೂ ಅಧಿಕ ಭಕ್ತರು ಶ್ರೀದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು. ಸುಮಾರು 4 ಸಾವಿರಕ್ಕೂ ಅಧಿಕ ಭಕ್ತರು ಅನ್ನ ಪ್ರಸಾದ ಸ್ವೀಕರಿಸಿದ್ದಾರೆ ಎಂದು ದೇಗುಲದ ಮೂಲಗಳು ತಿಳಿಸಿವೆ.

ದೇಗುಲದ ಆನುವಂಶಿಕ ಆಡಳಿತ ಧರ್ಮದರ್ಶಿ ಕೆ. ಶ್ರೀರಮಣ ಉಪಾಧ್ಯಾಯ , ವಿಶ್ರಾಂತ ಆಡಳಿತ ಧರ್ಮದರ್ಶಿ ಕೆ.ಸೂರ್ಯನಾರಾಯಣ ಉಪಾಧ್ಯಾಯ, ಆನುವಂಶಿಕ ಧರ್ಮದರ್ಶಿ ಕೆ.ಪದ್ಮನಾಭ ಉಪಾಧ್ಯಾಯ, ಕೆ.ನಿರಂಜನ ಉಪಾಧ್ಯಾಯ, ಆನುವಂಶಿಕ ಪರ್ಯಾಯ ಅರ್ಚಕ ಕೆ.ಕೃಷ್ಣಾನಂದ ಉಪಾಧ್ಯಾಯ ಮತ್ತು ಸಹೋದರರು ಹಾಗೂ ದೇವಳದ ವ್ಯವಸ್ಥಾಪಕ ನಟೇಶ್‌ ಕಾರಂತ್‌ ತೆಕ್ಕಟ್ಟೆ ಮತ್ತು ಅರ್ಚಕ ಮಂಡಳಿ ಸದಸ್ಯರು ಉಪಸ್ಥಿತರಿದ್ದರು.

 

Advertisement

Udayavani is now on Telegram. Click here to join our channel and stay updated with the latest news.

Next