ತೆಕ್ಕಟ್ಟೆ : ಸಪ್ತಕ್ಷೇತ್ರಗಳಲ್ಲಿ ಒಂದಾದ ಕುಂಭಾಸಿಯ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನವು ಕರಾವಳಿಯ ಪ್ರಸಿದ್ಧ ದೇವಸ್ಥಾನಗಳಲ್ಲಿ ಒಂದಾಗಿದೆ. ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಉಡುಪಿ-ಕುಂದಾಪುರ ನಡುವೆ ಹೆದ್ದಾರಿಯಿಂದ ಒಂದು ಕಿ.ಮೀ ಪೂರ್ವಕ್ಕೆ ನಿಸರ್ಗ ರಮಣೀಯವಾದ ಸ್ಥಳದಲ್ಲಿ ಕಂಗೊಳಿಸುವ ಈ ಪುಣ್ಯಕ್ಷೇತ್ರ ಆನೆಗುಡ್ಡೆ ಶ್ರೀ ವಿನಾಯಕ ದೇಗುಲ.
ಕರಾವಳಿಯ ಪ್ರಸಿದ್ಧ ದೇವಸ್ಥಾನಗಳಲ್ಲಿಯೇ ಅತೀ ಪುರಾತನವಾಗಿದ್ದು ಅಂಗಾರಕ ಸಂಕಷ್ಟ ಚತುರ್ಥಿಯಂದು ಅಧಿಕ ಸಂಖ್ಯೆಯಲ್ಲಿ ಭಕ್ತಾಧಿಗಳು ಬಂದು ಶ್ರೀ ದೇವರ ದರ್ಶನ ಪಡೆದು ಸೇವೆಯನ್ನು ಮಾಡಿಸಿಕೊಂಡು ಇಷ್ಟಾರ್ಥವನ್ನು ಪಡೆದು ಕೃತಾರ್ಥರಾಗುತ್ತಾರೆ. ಅಂಗಾರಕ ಸಂಕಷ್ಟ ಚತುರ್ಥಿಯಂದು ಗಣೇಶ ಶಕ್ತಿಯ ತೇಜೋತರಂಗಗಳು ಭೂಮಿಯ ಮೇಲೆ ಅತೀ ಹೆಚ್ಚು ಪ್ರಭಾವ ಬೀರುವಂತಹುದು ಎನ್ನುವ ನಂಬಿಕೆ ಇದೆ.
ಈ ಹಿನ್ನೆಲೆಯಲ್ಲಿ ಅಂಗಾರಕ ಸಂಕಷ್ಟ ಚತುರ್ಥಿ ಗಣೇಶನ ಆರಾಧನೆಗೆ ವಿಶೇಷವಾದ ದಿನವಾಗಿದೆ.
ಈ ಸಂದರ್ಭದಲ್ಲಿ ದೇವಳದ ಹಿರಿಯ ಧರ್ಮದರ್ಶಿ ಕೆ.ಸೂರ್ಯನಾರಾಯಣ ಉಪಾಧ್ಯಾಯ, ಆಡಳಿತ ಧರ್ಮದರ್ಶಿ ಕೆ.ಶ್ರೀರಮಣ ಉಪಾಧ್ಯಾಯ , ವ್ಯವಸ್ಥಾಪಕ ನಟೇಶ್ ಕಾರಂತ್ ತೆಕ್ಕಟ್ಟೆ ಹಾಗೂ ಸಿಬಂದಿಗಳು ಉಪಸ್ಥಿತರಿದ್ದರು.