ಬೆಳಗಾವಿ: ಸಂಸದ ಸುರೇಶ ಅಂಗಡಿ ಬೆಳಗಾವಿ ಗ್ರಾಮಿಣ ಕ್ಷೇತ್ರದ ರೈತರ ಜಮೀನಿಗೆ ಕೈ ಹಾಕಿ ರಿಂಗ್ ರೋಡ್ ಯೋಜನೆ ತಂದಿದ್ದಾರೆ. ರೈತರ ಜಮೀನಿನ ಮೇಲೆ ಕಣ್ಣು ಹಾಕಿ ತಮ್ಮ ಸ್ವಂತದ ಜಮೀನು ರಕ್ಷಣೆ ಮಾಡಿಕೊಂಡಿದ್ದಾರೆ ಎಂದು ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಟಾಳಕರ ಆರೋಪಿಸಿದರು.
ನರೇಂದ್ರ ಮೋದಿ ಅವರು 10 ಲಕ್ಷ ಸೂಟು, ಬೂಟು ಹಾಕಿಕೊಂಡು ವಿದೇಶ ಸುತ್ತುತ್ತಿದ್ದಾರೆ. ಮೋದಿ ಅವರು ಸೈನಿಕರನ್ನ ಪ್ರಚಾರಕ್ಕೆ ಬಳಸಿಕೊಳ್ಳುತ್ತಿದ್ದಾರೆ. ಎರಡು ಕೋಟಿ ಉದ್ಯೋಗ ಸೃಷ್ಟಿ, 15 ಲಕ್ಷ ರೂ. ಖಾತೆಗೆ ಹಾಕುವುದಾಗಿ ಹೇಳಿ ಜನರಿಗೆ ಮೋಸ ಮಾಡಿದ್ದಾರೆ ಎಂದು ಟೀಕಿಸಿದರು.
ಮಾಜಿ ಶಾಸಕ ಫಿರೋಜ್ ಸೇಠ ಮಾತನಾಡಿ, ಬಿಜೆಪಿ ಐದು ವರ್ಷದಲ್ಲಿ ದೇಶದ ಜನರಿಗೆ ಏನೂ ಮಾಡಲಿಲ್ಲ. ಜಾತಿ, ಜಾತಿಗಳ ನಡುವೆ ಮಧ್ಯೆ ವೈಷಮ್ಯದ ಬೀಜ ಬಿತ್ತುತ್ತಿದ್ದಾರೆ ಎಂದು ಆರೋಪಿಸಿದರು.
ಎಐಸಿಸಿ ಕಾರ್ಯದರ್ಶಿ ಯಶೋಮತಿ ಠಾಕೂರ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಮುಂಬೈ ಸಮುದ್ರದಲ್ಲಿ ಶಿವಾಜಿ ಮೂರ್ತಿ ಸ್ಥಾಪನೆಗೆ ಶಂಕು ಸ್ಥಾಪನೆ ಮಾಡಿದ್ದರು. ಆದರೆ ಈ ಸಮುದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಇಟ್ಟು ಹೋಗಿದ್ದ ಕಲ್ಲು ಕಾಣಿಸುತ್ತಿಲ್ಲ. ಛತ್ರಪತಿ ಶಿವಾಜಿಯ ಮೂರ್ತಿ ಪ್ರತಿಷ್ಠಾಪನೆ ಮಾಡದ ಬಿಜೆಪಿ ಶಿವಾಜಿ ಮಹಾರಾಜರ ಅಭಿಮಾನಿಗಳಿಗೆ ಅವಮಾನ ಮಾಡಿದೆ ಎಂದು ಆರೋಪಿಸಿದರು.
Advertisement
ತಾಲೂಕಿನ ಹಲಗಾ ಗ್ರಾಮದಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಿ.ಎಸ್. ಸಾಧುನವರ ಪರ ನಡೆದ ಸಮಾವೇಶದಲ್ಲಿ ಮಾತನಾಡಿದ ಅವರು, ಅಂಗಡಿ ಗಾಳಿಯಲ್ಲಿ ಆಯ್ಕೆ ಆಗುತ್ತ ಬಂದಿದ್ದಾರೆ. ಅಂಗಡಿ ಕಲ್ಲು ಇದ್ದ ಹಾಗೆ. ಅವರಿಗೆ ಜನರ ಪರಿಸ್ಥಿತಿ ಅರ್ಥ ಆಗುತ್ತಿಲ್ಲ ಎಂದು ಟೀಕಿಸಿದರು.
Related Articles
Advertisement
ಅಭ್ಯರ್ಥಿ ಡಾ| ವಿ.ಎಸ್. ಸಾಧುನವರ ಮಾತನಾಡಿ, ಕಾಂಗ್ರೆಸ್ ಈ ದೇಶಕ್ಕೆ ಹಲವಾರು ಕೊಡುಗೆಗಳನ್ನು ಕೊಟ್ಟಿದೆ. 70 ವರ್ಷದಲ್ಲಿ ಭವ್ಯ ಭಾರತ ನಿರ್ಮಾಣ ಮಾಡಿದ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಬೇಕು ಎಂದು ಮನವಿ ಮಾಡಿದರು.
ಜಿಲ್ಲಾಧ್ಯಕ್ಷ ವಿನಯ ನಾವಲಗಟ್ಟಿ, ಮುಖಂಡರಾದ ರಾಜು ಸೇಠ, ಯುವರಾಜ ಕದಂ, ಶಂಕರಗೌಡ ಪಾಟೀಲ, ಸಿ.ಸಿ. ಪಾಟೀಲ ಇತರರು ಇದ್ದರು.