ತುಮಕೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ನಗರದ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಸೋಮವಾರ ಅಂಗನವಾಡಿ ನೌಕರರು ಪ್ರತಿಭಟನೆ ನಡೆಸಿದರು.
ಅಖೀಲ ಭಾರತ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಒಕ್ಕೂಟ ಪ್ರತಿಭಟನೆಗೆ ಕರೆ ನೀಡಿದ್ದ ಹಿನ್ನೆಲೆಯಲ್ಲಿ ನಗರಕ್ಕೆ ಜಿಲ್ಲೆಯ ವಿವಿಧ ಭಾಗಗಳಿಂದ ಆಗಮಿಸಿದ್ದ ಸಾವಿರಾರು ಅಂಗನವಾಡಿ ಕಾರ್ಯಕರ್ತೆಯರು ತಮ್ಮ ಬೇಡಿಕೆಗಳನ್ನು ಸರ್ಕಾರಈಡೇರಿಸಬೇಕು ಎಂದು ಆಗ್ರಹಿಸಿದರು.
ಪ್ರತಿಭಟನಾಕಾರರನ್ನು ಉದ್ದೇಶಿಸಿ ಅಂಗನವಾಡಿ ನೌಕರರ ಒಕ್ಕೂಟದ ಜಿಲ್ಲಾಧ್ಯಕ್ಷೆ ಜಿ.ಕಮಲ ಮಾತನಾಡಿ, ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕರು ಹಲವಾರು ವರ್ಷಗಳಿಂದಲೂ ತಮ್ಮ ಬೇಡಿಕೆ ಈಡೇರಿಕೆಗಾಗಿ ಹೋರಾಟ ಮಾಡಲಾ ಗುತ್ತಿದೆ ಸರ್ಕಾರ ನಮ್ಮ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿದರು.
ಅಂಗನವಾಡಿ ನೌಕರರಿಗೆ ಕನಿಷ್ಠ ವೇತನ ಮಾಸಿಕ 21 ಸಾವಿರ ನಿಗದಿ ಮಾಡಬೇಕು, ಎಲ್ಲಾ ನೌಕರರಿಗೂ ಮಾಸಿಕ 10 ಸಾವಿರ ನಿವೃತ್ತಿ ವೇತನ ನೀಡಬೇಕು. ನೂತನ ಶಿಕ್ಷಣನೀತಿ 2020 ರಿಂದ ಅಂಗನವಾಡಿ ಕೇಂದ್ರಗಳನ್ನು ರಕ್ಷಿಸಬೇಕು ಎಂದು ಒತ್ತಾಯಿಸಿದರು.
ಅಂಗನವಾಡಿ ಕೇಂದ್ರಗಳಲ್ಲಿಯೇ ಶಾಲಾ ಪೂರ್ವ ಪ್ರಾಥಮಿಕ ಶಿಕ್ಷಣ ಕಡ್ಡಾಯ ಗೊಳಿಸಿ, ಹೆಚ್ಚುವರಿ ಕೆಲಸ ನಿರ್ಭಂಧಿಸುವುದೂ ಸೇರಿದಂತೆ ನಮ್ಮ ಹಲವು ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ಜಿಲ್ಲಾಧಿಕಾರಿಗಳ ಮೂಲಕಸರ್ಕಾರಕ್ಕೆಮನವಿಸಲ್ಲಿಸಿದರು. ಪ್ರತಿಭಟನೆಯಲ್ಲಿ ಜಿಲ್ಲಾ ಕಾರ್ಯದರ್ಶಿ ಗುಲ್ಜಾರ್, ಖಜಾಂಚಿ ಅನಸೂಯ ಭಾಗವಹಿಸಿದ್ದರು.