Advertisement
ರಾಜ್ಯ ಅಂಗನವಾಡಿ ನೌಕರರ ಸಂಘ, ಸಿಐಟಿಯು ಸಂಯೋಜಿತ ಅಖೀಲ ಭಾರತ ಅಂಗನವಾಡಿ ಕಾರ್ಯಕರ್ತೆಯರ ಮತ್ತುಸಹಾಯಕಿಯರ ಫೆಡರೇಶನ್ ವತಿಯಿಂದ ಏರ್ಪಟ್ಟಿದ್ದ ಪ್ರತಿಭಟನಾ ಮೆರವಣಿಗೆ ನಗರದ ಮಾಲಾದೇವಿ ಮೈದಾನದಿಂದ ಪ್ರಾರಂಭವಾಯಿತು. ನಗರದ ಪ್ರಮುಖ ರಸ್ತೆಗಳಲ್ಲಿ ಸಾಗಿ ಬಂದ ಮೆರವಣಿಗೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿಘೋಷಣೆ ಕೂಗಿದರು. ಅಲ್ಲದೇ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಮೆರವಣಿಗೆ ಜಿಲ್ಲಾಧಿಕಾರಿ ಕಚೇರಿತಲುಪಿದ ನಂತರ ಅಲ್ಲಿ ಪ್ರತಿಭಟನಾಕಾರರು ಸಮಾವೇಶಗೊಂಡರು.
Related Articles
Advertisement
ಪೂರ್ವ ಪ್ರಾಥಮಿಕ ಶಿಕ್ಷಣ ಕಡ್ಡಾಯಗೊಳಿಸಿ, ಹೆಚ್ಚುವರಿ ಕೆಲಸ ನಿರ್ಬಂಧಿ ಸಬೇಕು. ಆರಂಭಿಕ ಬಾಲ್ಯಾವಸ್ಥೆಯ ಪಾಲನೆ ಮತ್ತು ಶಿಕ್ಷಣವನ್ನು ಉಚಿತವಾಗಿ ಕಡ್ಡಾಯವಾಗಿ ಅಂಗನವಾಡಿ ಕೇಂದ್ರಗಳಲ್ಲಿ ಕೊಡಲು ಶಾಸನ ರೂಪಿಸಬೇಕು ಎಂದು ಮಾಲಿನಿ ಮೇಸ್ತ ಸರ್ಕಾರವನ್ನು ಆಗ್ರಹಿಸಿದರು.
ಕೋವಿಡ್ ದಿಂದ ಮೃತರಾದ 26 ಮತ್ತು ಕೆಲಸದ ಒತ್ತಡದಿಂದ ಮೃತರಾದ ಅಂಗನವಾಡಿ ನೌಕರರ ಮಕ್ಕಳಿಗೆ ನೇಮಕಾತಿ ನಿಯಮ ಸಡಿಲಿಸಿ ಅನುಕಂಪದ ಆಧಾರದಲ್ಲಿ ಕೆಲಸ ನೀಡಬೇಕು. ಕೋವಿಡ್ ಸಂದರ್ಭದಲ್ಲಿ ಕೆಲಸದ ಒತ್ತಡದಿಂದ ನಿಧನರಾದ 32 ಜನ ಅಂಗನವಾಡಿ ನೌಕರರಿಗೆ ಕನಿಷ್ಟ 5 ಲಕ್ಷ ರೂ. ಪರಿಹಾರ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿದರು. ನಂತರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ಪ್ರತಿಭಟನೆಯ ನೇತೃತ್ವವನ್ನು ಸಂಘಟನಾ ಕಾರ್ಯದರ್ಶಿ ವಿದ್ಯಾ ವೈದ್ಯ, ಗೀತಾ ನಾಯ್ಕ, ಯಮುನಾ ವಹಿಸಿದ್ದರು.