Advertisement
ದೇಶದಲ್ಲಿ ಕಾರ್ಮಿಕ ಮತ್ತು ರೈತ ಮಹಿಳೆಯರ ವಿರೋಧಿ ಕಾನೂನುಗಳನ್ನು ಜಾರಿಗೆ ತರಲು ಹೊರಟಿರುವ ಕೇಂದ್ರ ಮತ್ತು ರಾಜ್ಯ ಸರ್ಕಾರಗಳುತಂದಿರುವ ನೀತಿ ವಿರೋಧಿ ಸಿ ಹೋರಾಟಕ್ಕೆ ಮುಂದಾಗಿದ್ದೇವೆ ಎಂದು ತಾಲೂಕು ಅಧ್ಯಕ್ಷ ಬಿ.ಮಹಾಂತಮ್ಮ ಅಭಿಪ್ರಾಯಪಟ್ಟರು.
Related Articles
Advertisement
ಸಿರುಗುಪ್ಪ: ಜನಸಾಮಾನ್ಯರಿಗೆ ಮಾರಕವಾದ ಕಾಯ್ದೆಗಳನ್ನು ಕೇಂದ್ರ ಸರ್ಕಾರ ಹಿಂಪಡೆಯುವಂತೆ ಒತ್ತಾಯಿಸಿ ಅಖೀಲ ಭಾರತ ಸಮನ್ವಯ ತಾಲೂಕು ಸಮಿತಿ ಸದಸ್ಯರು ನಗರದಲ್ಲಿ ಪ್ರತಿಭಟನೆ ನಡೆಸಿದರು.
ಸಮಿತಿ ತಾಲೂಕು ಅಧ್ಯಕ್ಷ ವಾ. ಹುಲುಗಯ್ಯ ಮಾತನಾಡಿ ಕೇಂದ್ರ ಮತ್ತು ರಾಜ್ಯ ಸರ್ಕಾರ ಕರ್ನಾಟಕ ಭೂಸುಧಾರಣೆ ಕಾಯ್ದೆ ಸೇರಿ 19ಕ್ಕೂ ಹೆಚ್ಚು ಕಾಯ್ದೆಗಳನ್ನು ತಿದ್ದುಪಡಿ ಮಾಡಿರುವುದು ಬಂಡವಾಳ ಶಾಹಿಗಳಿಗೆ ಮತ್ತು ಕಾರ್ಪೋರೇಟ್ ಕಂಪನಿಗಳಿಗೆ ಹಾಗೂ ಕಪ್ಪು ಹಣ ಹೊಂದಿದವರಿಗೆ ಹೆಚ್ಚು ಭೂಮಿ ಕ್ರೂಡೀಕರಿಸಲು, ಕಪ್ಪು ಹಣ ಬಿಳಿಯಾಗಿಸಿಕೊಳ್ಳಲು ಇಂಥ ಕಂಪನಿಗಳ ಮಾಲೀಕರಿಗೆ ಅನುಕೂಲವಾಗಲಿದೆ. ಈ ಕಾನೂನುಗಳನ್ನು ಸರ್ಕಾರ ಹಿಂಪಡೆಯಬೇಕು. ಕರ್ನಾಟಕದಲ್ಲಿ ಅನೇಕ ವರ್ಷಗಳಿಂದ ಸರ್ಕಾರಿ ಜಮೀನುಗಳಲ್ಲಿ ಸಾಗುವಳಿ ಮಾಡುವ ರೈತರಿಗೆ ಹಕ್ಕುಪತ್ರ ಕೊಡಲು ಫಾರಂ ನಂ.50, 53, 57ರ ಅಡಿಯಲ್ಲಿ ಅರ್ಜಿಗಳನ್ನು ಸರ್ಕಾರಕ್ಕೆ ಇಲ್ಲಿಯವರೆಗೆ ಸಲ್ಲಿಸುತ್ತ ಬಂದಿದ್ದರೂ ಅವರಿಗೆ ಹಕ್ಕುಪತ್ರಗಳನ್ನು ನೀಡದೆ ಇರುವುದು ಖಂಡನೀಯ. ಆದ್ದರಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ತಿದ್ದುಪಡಿ ಮಾಡಿರುವ 20ಕ್ಕೂ ಹೆಚ್ಚು ಕಾಯ್ದೆಗಳನ್ನು ಕೈಬಿಡಬೇಕೆಂದು ಒತ್ತಾಯಿಸಿದರು.
ಮುಖಂಡರಾದ ವಿ.ಮಾರುತಿ, ಜೆ. ಸಿದ್ದರಾಮಗೌಡ, ಎಚ್.ಎಂ. ವೀರೇಶಪ್ಪ, ಓಬಳೇಶಪ್ಪ, ಎಚ್. ತಿಪ್ಪಯ್ಯ, ಲತೀಫ್ ಖಾಜ ಮತ್ತು ಕಾರ್ಯಕರ್ತರು ಇದ್ದರು.