Advertisement

21 ಸಾವಿರ ವೇತನ ನೀಡಿ, ಸೇವೆ ಕಾಯಂಗೊಳಿಸಿ

04:04 PM Nov 10, 2020 | Suhan S |

ಚಾಮರಾಜನಗರ: ಕೇಂದ್ರ ಸರ್ಕಾರ ಜಾರಿಗೊಳಿಸಲು ಉದ್ದೇಶಿಸಿರುವ ನೂತನ ಶಿಕ್ಷಣ ನೀತಿ ರದ್ದು ಮಾಡಬೇಕು, ಅಂಗನವಾಡಿ ನೌಕರರಿಗೆ 21 ಸಾವಿರ ಕನಿಷ್ಠ ವೇತನ ನೀಡಬೇಕು, ಸೇವೆ ಕಾಯಂಗೊಳಿಸಬೇಕು ಎಂಬ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯ ಅಂಗನವಾಡಿ ನೌಕರರ ಸಂಘ (ಸಿಐಟಿಯು) ಜಿಲ್ಲಾ ಘಟಕದ ವತಿಯಿಂದ ನಗರದಲ್ಲಿ ರ್ಯಾಲಿ ನಡೆಯಿತು.

Advertisement

ನಗರದ ಚಾಮರಾಜೇಶ್ವರ ಉದ್ಯಾನದ ಬಳಿಯಿಂದ ರ್ಯಾಲಿ ಆರಂಭಿಸಿದ ಅಂಗನವಾಡಿ ನೌಕರರು ಬಿ.ರಾಚಯ್ಯ ಜೋಡಿರಸ್ತೆ ಮೂಲಕ ಜಿಲ್ಲಾಡಳಿತ ಭವನ ತಲುಪಿ ಧರಣಿ ನಡೆಸಿದರು.

ಬೇಡಿಕೆಗಳು: ಅಂಗನವಾಡಿ ನೌಕರರಿಗೆ 10 ಸಾವಿರ ನಿವೃತ್ತಿ ವೇತನ ನೀಡಬೇಕು. ಐಸಿಡಿಎಸ್‌ಗೆ ಪ್ರತ್ಯೇಕ ನಿರ್ದೇಶನಾಲಯ ಪ್ರಾರಂಭಿಸಬೇಕು. ಎಲ್ಲರಿಗೂ ಪಿಂಚಣಿ, ಎನ್‌ಪಿಎಸ್‌ ರದ್ದುಮಾಡಿ, ಹಿಂದಿನ ಪಿಂಚಣಿ ಯೋಜನೆ ಮುಂದುವರಿಸಬೇಕು, ಜ್ಯೇಷ್ಠತೆ ಆಧಾರದಲ್ಲಿ ವೇತನ ನಿಗದಿ ಮಾಡಬೇಕೆಂದರು.

ನ.26 ರಂದು ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ವಿಧೇಯಕ ವಾಪಸ್‌ ಪಡೆಯುವಂತೆ ಆಗ್ರಹಿಸಿ ಕೇಂದ್ರಿಯ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ದೇಶವ್ಯಾಪಿ ಮುಷ್ಕರಕ್ಕೆ ಕರೆನೀಡಿದೆ. ಸಮಿತಿ ಬೆಂಬಲಿಸಿ ಅಂದು ಅಂಗನವಾಡಿ ಕೇಂದ್ರಗಳನ್ನು ಬಂದ್‌ ಮಾಡಿ, ಹಕ್ಕೊತ್ತಾಯಗಳ ಈಡೇರಿಕೆಗೆ ಆಗ್ರಹಿಸಲಾಗುವುದು ಎಂದರು.

ಅಂಗನವಾಡಿ ನೌಕರರ ಸಂಘದ ಜಿಲ್ಲಾಧ್ಯಕ್ಷೆ ಕೆ.ಸುಜಾತಾ, ಪ್ರಧಾನ ಕಾರ್ಯದರ್ಶಿ ಎ.ನಾಗಮಣಿ, ಖಜಾಂಚಿ ಭಾಗ್ಯಾ ವಿಮಲ,ಗುರುಮಲ್ಲಮ್ಮ,ಸುಮಿತ್ರ,ಜಯಮಾಲ,ಪಾರ್ವತಮ್ಮ, ಮೀನಾ, ಮರಿಯಮ್ಮ, ರೇವಮ್ಮ, ಶಾಹಿದಾ, ಸುಂದ್ರಮ್ಮ, ಸರೋಜಾ, ಪುಟ್ಟಬಸಮ್ಮ, ಮೀನಾಕ್ಷಿ ಅನಿತಾ ಸೇರಿದಂತೆ ನೂರಾರು ಮಂದಿ ಇದ್ದರು.

Advertisement

ಮಕ್ಕಳಿಗೆ ಟ್ಯಾಬ್‌ ವಿತರಣೆ :

ಕೊಳ್ಳೇಗಾಲ: ರೈತರಿಗೆ, ಬಡವರಿಗೆ ಮತ್ತು ವಿದ್ಯಾರ್ಥಿಗಳಿಗೆ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆ ಸಾಕಷ್ಟು ಸೌಲಭ್ಯಗಳನ್ನುಕಲ್ಪಿಸಿ ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಬಲಪಡಿಸುವ ಪ್ರಯತ್ನ ಮಾಡುತ್ತಿದೆ ಎಂದು ಹನೂರು ಶಾಸಕ ಆರ್‌.ನರೇಂದ್ರ ಹೇಳಿದರು.

ಪಟ್ಟಣದ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಆವರಣದಲ್ಲಿ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆಕಂಪ್ಯೂಟರ್‌, ಟ್ಯಾಬ್‌ ವಿತರಣೆ ಮಾಡಿದ ಬಳಿಕ ಮಾತನಾಡಿದರು. ರಾಜ್ಯಾದ್ಯಂತ ಧರ್ಮಸ್ಥಳದ ವೀರೇಂದ್ರ ಹೆಗ್ಗಡೆ ಅವರು ಬಡ ವಿದ್ಯಾರ್ಥಿಗಳಿಗೆ ಸುಮಾರು 91ಕೋಟಿ ರೂ. ಅಂದಾಜಿನಲ್ಲಿಕಂಪ್ಯೂಟರ್‌ ಮತ್ತು ಟ್ಯಾಬ್‌ಗಳನ್ನು ರಿಯಾಯ್ತಿ ದರದಲ್ಲಿ ವಿತರಣೆ ಮಾಡುತ್ತಿರುವ ಬಗ್ಗೆ ಶ್ಲಾ ಸಿದರು. ತಾಲೂಕಿನ24 ವಿದ್ಯಾರ್ಥಿಗಳಿಗೆ ಕಂಪ್ಯೂಟರ್‌,34 ವಿದ್ಯಾರ್ಥಿಗಳಿಗೆ ಟ್ಯಾಬ್‌ ವಿತರಿಸಿದ ಶಾಸಕರು, ಇದನ್ನು ಸಂಪೂರ್ಣ ಬಳಕೆ ಮಾಡಿಕೊಂಡು ಉತ್ತಮ ಫ‌ಲಿತಾಂಶ ತರುವ ಮೂಲಕ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ

ಯೋಜನೆ ಸಂಸ್ಥೆಗೆ ಕೀರ್ತಿ ತರಬೇಕೆಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು. ವಿತರಣೆ ವೇಳೆ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನಾಧಿಕಾರಿ ಪುರುಷೋತ್ತಮ್‌, ಸಿಬ್ಬಂದಿ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next