Advertisement

ರೈಲಿನಲ್ಲೇ ಹೆರಿಗೆ ಮಾಡಿಸಿದ ಅಂಗನವಾಡಿ ಕಾರ್ಯಕರ್ತೆಯರು

10:54 PM Dec 10, 2019 | Team Udayavani |

ಕಲಬುರಗಿ: ಬೆಂಗಳೂರಿನಲ್ಲಿ ಆಯೋಜಿಸಿರುವ ಅನಿರ್ಧಿಷ್ಟಾವಧಿ ಧರಣಿಯಲ್ಲಿ ಪಾಲ್ಗೊಳ್ಳಲು ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಅಂಗನವಾಡಿ ಕಾರ್ಯಕರ್ತೆಯರು, ಸಹ ಪ್ರಯಾಣಿಕ ಮಹಿಳೆಯೊಬ್ಬರಿಗೆ ಸುರಕ್ಷಿತವಾಗಿ ಹೆರಿಗೆ ಮಾಡಿಸಿದ ಘಟನೆ ಸೋಮವಾರ ರಾತ್ರಿ ನಡೆದಿದೆ. ಯಾದಗಿರಿ ಜಿಲ್ಲೆಯ ಸೈದಾಪುರ ನಿವಾಸಿ ಗೀತಾ ಗಂಡು ಮಗುವಿಗೆ ಜನ್ಮ ನೀಡಿದ್ದು, ತಾಯಿ-ಮಗು ಆರೋಗ್ಯವಾಗಿದ್ದಾರೆ.

Advertisement

ಮುಂಬೈ-ಬೆಂಗಳೂರು ಉದ್ಯಾನ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಸೋಮವಾರ ರಾತ್ರಿ ಬೆಂಗಳೂರಿಗೆ ಪತಿ ಜೊತೆ ಹೊರಟಿದ್ದ ಗೀತಾರಿಗೆ, ಪ್ರಯಾಣದ ಮಧ್ಯೆ ಹೆರಿಗೆ ನೋವು ಕಾಣಿಸಿತ್ತು. ಅದೇ ಬೋಗಿಯಲ್ಲಿ ಕಲಬುರಗಿ ಜಿಲ್ಲೆಯ ಅಂಗನವಾಡಿ ಕಾರ್ಯಕರ್ತೆಯರು ತೆರಳುತ್ತಿದ್ದರು. ಹೆರಿಗೆ ನೋವು ಕಾಣಿಸಿಕೊಂಡ ವಿಷಯ ತಿಳಿದ ಚಿತ್ತಾಪುರ ತಾಲೂಕು ನಾಲವಾರದ ಅಂಗನವಾಡಿ ಕಾರ್ಯಕರ್ತೆಯರಾದ ಮಲ್ಲಿಕಾ, ಹಾಲಾಬಾಯಿ ಮತ್ತಿತರರು, ಗೀತಾಗೆ ಸುಲಭದ ಹೆರಿಗೆ ಮಾಡಿಸಿದರು. ತಡರಾತ್ರಿ ರಾಯಚೂರು-ಗುಂತಕಲ್‌ ಮಾರ್ಗದಲ್ಲಿ ಗೀತಾ ಮಗುವಿಗೆ ಜನ್ಮ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next