Advertisement

ಅಂಗನವಾಡಿಗಳ ಅಭಿವೃದ್ದಿಗೆ ಶ್ರಮ: ಮೀನಾಕ್ಷಮ್ಮ

12:14 PM Nov 25, 2021 | Team Udayavani |

ಅಫಜಲಪುರ: ತಾಲೂಕಿನಲ್ಲಿ 260 ಅಂಗನವಾಡಿ ಕೇಂದ್ರಗಳಿದ್ದು ಅವುಗಳ ಮೂಲಭೂತ ಸೌಕರ್ಯಗಳಿಗೆ ಹೆಚ್ಚಿನ ಒತ್ತುಕೊಟ್ಟು ಸಾರ್ವಜನಿಕರ ಸಹಕಾರದೊಂದಿಗೆ ಅಭಿವೃದ್ಧಿಪಡಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮೀನಾಕ್ಷಮ್ಮ ಪಾಟೀಲ ತಿಳಿಸಿದರು.

Advertisement

ತಾಲೂಕಿನ ದೇಸಾಯಿ ಕಲ್ಲೂರ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ವಲಯ ಮಟ್ಟದ ಅಂಗನವಾಡಿ ಕಾರ್ಯಕರ್ತೆಯರ ಸಭೆಯಲ್ಲಿ ಮಾತನಾಡಿದ ಅವರು ಮೂಲಭೂತ ಸೌಕರ್ಯಗಳ ಕೊರತೆ ಇರುವ ಅಂಗನವಾಡಿ ಕೇಂದ್ರಗಳಿಗೆ ಹತ್ತು ದಿನಗಳಲ್ಲಿ ಫ್ಯಾನ್‌, ವಿದ್ಯುತ್‌, ಶೌಚಾಲಯ, ಕಂಪೌಂಡ್‌ ಸೇರಿದಂತೆ ಮುಂತಾದ ಮೂಲಭೂತ ಸೌಕರ್ಯ ಒದಗಿಸಲಾಗುವುದು. ಸ್ವಚ್ಛ ಭಾರತ ಮಿಷನ್‌ ಯೋಜನೆ ಅಡಿಯಲ್ಲಿ 82 ಅಂಗನವಾಡಿಗಳಿಗೆ ಶೌಚಾಲಯಗಳು ಮಂಜೂರಾಗಿದ್ದು, ಕಾರ್ಯಕರ್ತೆಯರು ಶೌಚಾಲಯ ನಿರ್ಮಾಣ ಮಾಡುವ ಸಂದರ್ಭದಲ್ಲಿ ಗುಣಮಟ್ಟ ಪರಿಶೀಲಿಸಿ ಇಲಾಖೆ ಗಮನಕ್ಕೆ ತರಬೇಕು ಎಂದು ಹೇಳಿದರು.

ಮಕ್ಕಳನ್ನು ಪೌಷ್ಟಿಕವಾಗಿ ಬೆಳೆಸಲು ಸರ್ಕಾರದಿಂದ ಬರುವ ಪ್ರತಿಯೊಂದು ಆಹಾರ ಪದಾರ್ಥಗಳನ್ನು ತಪ್ಪದೇ ಎಲ್ಲ ಮಕ್ಕಳಿಗೆ ವಿತರಿಸಬೇಕು. ಗರ್ಭಿಣಿಯರು, ಬಾಣಂತಿಯರಿಗೆ ಪೌಷ್ಟಿಕಾಂಶವುಳ್ಳ ಆಹಾರ ನೀಡುವ ಮೂಲಕ ಹಾಗೂ ಸರ್ಕಾರದಿಂದ ಬರುವ ಯೋಜನೆಗಳ ಬಗ್ಗೆ ಜಾಗೃತಿ ಮೂಡಿಸಬೇಕು. ಅಕ್ರಮವಾಗಿ ಅಂಗನವಾಡಿ ಆಹಾರ ಪದಾರ್ಥಗಳ ಸಾಗಾಣಿಕೆ ನಡೆಯುತ್ತಿದೆ ಎಂದು ಹಲವಾರು ಆರೋಪಗಳು ಕೇಳಿಬರುತ್ತಿವೆ. ಇದರಿಂದಾಗಿ ಇಲಾಖೆಗೆ ಕೆಟ್ಟ ಹೆಸರು ಬರುತ್ತಿದೆ. ಆದ್ದರಿಂದ ಇನ್ನು ಮುಂದೆ ಯಾರೂ ಇಂತಹ ಕೃತ್ಯಕ್ಕೆ ಕೈಹಾಕಬೇಡಿ. ಹಾಗೆ ನಡೆದುಕೊಂಡರೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

ಹಿರಿಯ ಅಂಗನವಾಡಿ ಮೇಲ್ವಿಚಾರಕಿ ಶಿವಲೀಲಾ ಡೆಗ್ಗಿ, ಗುರುಬಾಯಿ ಮುದ್ದೇಬಿಹಾಳ, ಅಂಗನವಾಡಿ ಕಾರ್ಯಕರ್ತೆ ಅನುಸುಬಾಯಿ ಸುತಾರ್‌, ಮಹಾನಂದ ತಳವಾರ, ಪ್ರಭಾವತಿ ನೆಲೋಗಿ, ಕಾಶಿಬಾಯಿ ಕುಲಕರ್ಣಿ, ಮಹಾದೇವಿ ರಾಠೊಡ, ಅಂಬೂಬಾಯಿ ಕುಂಬಾರ, ಮಾಹನಂದ ಶೇಖಧಾರ ಮುಂತಾದವರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next