Advertisement

ಗ್ರಾಚ್ಯುಟಿ, ಪಿಂಚಣಿಗಾಗಿ ಅಂಗನವಾಡಿ ನೌಕರರ ಧರಣಿ

03:26 PM Jan 31, 2023 | Team Udayavani |

ಹಾಸನ: ನಿವೃತ್ತರಾಗುವ ಅಂಗನವಾಡಿ ಕಾರ್ಯಕರ್ತೆ ಯರು ಮತ್ತು ಸಹಾಯಕಿಯರಿಗೆ ಗ್ರಾಚ್ಯುಟಿ, ಮಾಸಿಕ ಪಿಂಚಣಿ ಜಾರಿಗೊಳಿಸಬೇಕು ಎಂಬ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಿವೃತ್ತ ಅಂಗನವಾಡಿ ನೌಕರರು ಎಐಟಿಯುಸಿ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಸೋಮವಾರ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು.

Advertisement

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಸಮಗ್ರ ಶಿಶು ಅಭಿವೃದ್ಧಿ ಯೋಜನೆಯಲ್ಲಿ ದುಡಿದು ನಿವೃತ್ತರಾಗಿರುವ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು ತೀವ್ರ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದು, ವೃದ್ಧಾಪ್ಯ ಜೀವನವನ್ನು ಜಿಗುಪ್ಸೆಯಿಂದ ನಡೆಸುತ್ತಿದ್ದಾರೆ ಎಂದು ಹೇಳಿದರು.

ಸಾಮಾಜಿಕ ಅಭಿವೃದ್ಧಿ ರೂವಾರಿಗಳು: ಕೇವಲ ಕನಿಷ್ಠ ಗೌರವಧನ ಆಧಾರದಲ್ಲಿ ಸೇವೆ ಸಲ್ಲಿಸುತ್ತಿರುವ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಸಮಗ್ರ ಶಿಶು ಅಭಿವೃದ್ಧಿ ಯೋಜನೆಯನ್ನು ಜಾರಿಗೊಳಿಸುವಲ್ಲಿ ಮಹತ್ತರ ಪಾತ್ರ ವಹಿಸುತ್ತಿದ್ದಾರೆ. ಆರು ವರ್ಷದೊಳಗಿನ ಮಕ್ಕಳು ಮತ್ತು ಅವರ ತಾಯಂದಿರು. ಪೌಷ್ಟಿಕ ಆಹಾರ, ಆರೋಗ್ಯ ರಕ್ಷಣೆಯೊಂದಿಗೆ ಶಾಲಾ-ಪೂರ್ವ ಶಿಕ್ಷಣದ ಜವಾಬ್ದಾರಿಯನ್ನು ನಿರ್ವಹಿಸುವ ಮೂಲಕ ಸಾಮಾಜಿಕ ಅಭಿವೃದ್ಧಿಯ ರೂವಾರಿಗಳಾಗಿದ್ದಾರೆ ಎಂದು ಹೇಳಿದರು.

ಕಾಳಜಿ ತೊರದೇ ನಿರ್ಲಕ್ಷ್ಯ: ಇಂತಹ ಮಹತ್ತರ ಸೇವೆ ಸಲ್ಲಿಸುತ್ತಿರುವ ಅಂಗನವಾಡಿ ಉದ್ಯೋಗಿಗಳ ಕ್ಷೇಮಾಭಿವೃದ್ಧಿಯ ಬಗ್ಗೆ ಸರ್ಕಾರ ಯಾವುದೇ ಕಾಳಜಿ ತೊರದೇ ನಿರ್ಲಕ್ಷಿಸಿಕೊಂಡು ಬರುತ್ತಿದೆ ಎಂದು ದೂರಿದರು. ಸಂಕಷ್ಟದ ಜೀವನ: ಅಂಗನವಾಡಿ ಕಾರ್ಯಕತೆಯರು, ಸಹಾಯಕಿಯರು ನಿವೃತ್ತಿಗೊಂಡಾಗ ಕನಿಷ್ಠ ಪ್ರಮಾಣದ ಇಡಿಗಂಟನ್ನು ನೀಡಿ, ತಮ್ಮ ಜವಾಬ್ದಾರಿ ಯಿಂದ ನುಣುಚಿಕೊಳ್ಳುತ್ತಿರುವ ಸರ್ಕಾರಗಳು, ಅವರ ನಿವೃತ್ತಿ ಜೀವನ ನಿರ್ವಹಣೆಗಾಗಿ ಅಗತ್ಯವಾಗಿರುವ ಪಿಂಚಣಿ, ಆರೋಗ್ಯದಂತಹ ಸಾಮಾಜಿಕ ಸುರûಾ ಯೋಜನೆಗಳನ್ನು ಜಾರಿಗೊಳಿ ಸಲು ಆಸಕ್ತಿವಹಿಸುತ್ತಿಲ್ಲ. ಇದರ ಪರಿಣಾಮ ನಿವೃತ್ತಿಗೊಂಡಿರುವ ಕಾರ್ಯಕರ್ತೆಯರು – ಸಹಾಯಕಿ ಯರು ನರಕಯಾತನೆ ಅನುಭವಿಸುತ್ತಿದ್ದಾರೆ ಎಂದು ಆತಂಕ ವ್ಯಕ್ತಪಡಿಸಿದರು.

ಅಗತ್ಯ ನಿರ್ಧಾರ ಕೈಗೊಳ್ಳಲಿ: ನಿವೃತ್ತ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರಿಗೆ ಮಾಸಿಕ ಕನಿಷ್ಠ 5000 ರೂ. ಮಾಸಿಕ ಪಿಂಚಣಿ ನೀಡುವ ಯೋಜನೆ ಜಾರಿಗೊಳಿಸಬೇಕು. ಗ್ರಾಚ್ಯುಟಿ ಪಡೆಯಲು ಅಂಗನವಾಡಿ ಉದ್ಯೋಗಿಗಳು ಅರ್ಹರು ಎಂದು ಸುಪ್ರೀಂಕೋರ್ಟ್‌ ನೀಡಿರುವ ತೀರ್ಪಿನಂತೆ ರಾಜ್ಯದಲ್ಲಿಯೂ ಗ್ರಾಚ್ಯುಟಿ ಸೌಲಭ್ಯವನ್ನು ಶಾಸನಾತ್ಮಕವಾಗಿ ಜಾರಿಗೊಳಿಸಲು ರಾಜ್ಯ ಸರ್ಕಾರ ಅಗತ್ಯ ನಿರ್ಧಾರ ತೆಗೆದುಕೊಳ್ಳಬೇಕೆಂದು ಒತ್ತಾಯಿಸಿದರು.

Advertisement

ನಿವೃತ್ತ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಫೆಡರೇಷನ್‌ ಜಿಲ್ಲಾಧ್ಯಕ್ಷೆ ನೇತ್ರಾವತಿ, ಗೌರವಾಧ್ಯಕ್ಷೆ ಜಯಲಕ್ಷ್ಮೀ, ಕಾರ್ಯದರ್ಶಿ ಬಿ.ನಾಗರತ್ನಮ್ಮ, ಖಜಾಂಚಿ ಪಿ.ಡಿ.ನಾಗರತ್ನ, ಬಿ.ಲತಾ, ಎಐಟಿಯುಸಿ ಮುಖಂಡ ಎಂ.ಸಿ.ಡೋಂಗ್ರೆ ಮತ್ತಿತರರು ಪಾಲ್ಗೊಂಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next