Advertisement

ಇಂದಿನಿಂದ ಅಂಗನವಾಡಿ,ಪೂರ್ವ ಪ್ರಾಥಮಿಕ ಆರಂಭ

01:00 AM Nov 08, 2021 | Team Udayavani |

ಮಂಗಳೂರು/ಉಡುಪಿ: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ನ. 8ರಿಂದ ಪೂರ್ವ ಪ್ರಾಥಮಿಕ ತರಗತಿಗಳು ಮತ್ತು ಅಂಗನವಾಡಿಗಳು ಆರಂಭವಾಗಲಿವೆ.

Advertisement

ಅಂಗನವಾಡಿ ಕೇಂದ್ರಗಳನ್ನು ಮೊದಲಿನ ಹಂತದಲ್ಲಿ ಬೆಳಗ್ಗೆ 10ರಿಂದ ಮಧ್ಯಾಹ್ನ 12ರ ವರೆಗೆ ತೆರೆಯಬಹುದಾಗಿದೆ. ಮುಂದಿನ ಸೂಚನೆವರೆಗೆ ಪೂರಕ ಪೌಷ್ಟಿಕ ಆಹಾರವನ್ನು ಮನೆಗೆ ನೀಡಲಾಗುವುದು. 15 ದಿನಗಳ ಅನಂತರ ಪರಿಸ್ಥಿತಿಯನ್ನು ಅವಲೋಕಿಸಿ ಪೌಷ್ಟಿಕ ಆಹಾರವನ್ನು ಕೇಂದ್ರದಲ್ಲಿಯೇ ನೀಡಲಾಗುತ್ತದೆ.

ದ.ಕ. ಜಿಲ್ಲೆಯಲ್ಲಿ 2,108 ಅಂಗನವಾಡಿಗಳಿದೆ. ಫಲಾನುಭವಿಗಳ ಅಂದಾಜು ಸಂಖ್ಯೆ 1.80 ಲಕ್ಷವಿದ್ದು, ಅಂಗನವಾಡಿ ಕಾರ್ಯಕರ್ತೆ/ಸಹಾಯಕಿಯರು 4,200 ಮಂದಿ ಇದ್ದಾರೆ.

ಎಲ್‌ಕೆಜಿ ಹಾಗೂ ಯುಕೆಜಿಯು ಸೋಮವಾರದಿಂದ ಶುಕ್ರವಾರದವರೆಗೆ ಬೆಳಗ್ಗೆ 9.30ರಿಂದ ಅಪರಾಹ್ನ 3.30ರ ವರೆಗೆ ನಡೆಸಲು ಸೂಚನೆ ನೀಡಲಾಗಿದೆ. ತರಗತಿಗಳನ್ನು ಸಿಂಗರಿಸಲಾಗಿದ್ದು, ಪುಟಾಣಿಗಳ ಸ್ವಾಗತಕ್ಕೆ ಸಕಲ ತಯಾರಿ ಮಾಡಲಾಗಿದೆ.

ಇದನ್ನೂ ಓದಿ:ಮುಸ್ಲಿಮೇತರರಿಗೆ ಕೌಟುಂಬಿಕ ಕಾನೂನು ಸವಲತ್ತು : ಅಬುಧಾಬಿ ಸರ್ಕಾರದಿಂದ ಮಹತ್ವದ ನಿರ್ಧಾರ

Advertisement

ಉಡುಪಿ: 1,191 ಅಂಗನವಾಡಿ
ಉಡುಪಿ: ಪೂರ್ವ ಪ್ರಾಥಮಿಕ ಮತ್ತು ಅಂಗನವಾಡಿಗಳು ಇಂದಿನಿಂದ ಆರಂಭಗೊಳ್ಳಲಿರುವ ಕಾರಣ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಎಲ್ಲ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಜಿಲ್ಲೆಯ ಉಡುಪಿ, ಬ್ರಹ್ಮಾವರ, ಕುಂದಾಪುರ ಮತ್ತು ಕಾರ್ಕಳದ ಒಟ್ಟು 4 ಶಿಶು ಅಭಿವೃದ್ದಿ ಯೋಜ ನಾಧಿಕಾರಿಗಳ ವ್ಯಾಪ್ತಿಯ 1,191 ಅಂಗನವಾಡಿಗಳನ್ನು ಸಂಪೂರ್ಣ ಸ್ಯಾನಿಟೈಸ್‌ ಮಾಡಲಾಗಿದೆ. ಎಲ್ಲ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕರು 2 ಡೋಸ್‌ ಲಸಿಕೆ ಪಡೆದಿರುವುದನ್ನು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಪರಿಶೀಲಿಸಲಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next