ಹೊರಡಿಸಿದ್ದಾರೆ. ಈ ಸಂಬಂಧ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
Advertisement
ಕೇಂದ್ರ ಪುರಸ್ಕೃತ ಸಮಗ್ರ ಶಿಶು ಅಭಿವೃದ್ಧಿ ಯೋಜನೆಯಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಂಗನವಾಡಿ ಕೇಂದ್ರಗಳಲ್ಲಿ ಐಸಿಡಿಎಸ್‌ನ 6 ಸೇವೆಗಳನ್ನು ಫಲಾನುಭವಿಗಳಿಗೆ ಒದಗಿಸುವುದು ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಮುಖ್ಯ ಕರ್ತವ್ಯವಾಗಿರುತ್ತದೆ. ಆದ್ದರಿಂದ ಇವರಿಗೆ ಶಿಶು ಅಭಿವೃದ್ಧಿ ಯೋಜನೇತರ ಕೆಲಸ ಅಥವಾ ಇತರ ಯಾವುದೇ ಕೆಲಸಗಳನ್ನುವಹಿಸುವುದರಿಂದ ಕೆಲಸದ ಒತ್ತಡ ಹೆಚ್ಚಾಗುತ್ತದೆ. ಇದರಿಂದಾಗಿ ಅಂಗನವಾಡಿ ಕೇಂದ್ರಗಳಲ್ಲಿ ಶಿಶು ಅಭಿವೃದ್ಧಿ ಯೋಜನೆಯ ಮೂಲ ಸೇವೆಗಳನ್ನು ಫಲಾನುಭವಿಗಳಿಗೆ ಒದಗಿಸಲು ಅಡಚಣೆಯಾಗುತ್ತದೆ. ಹೀಗಾಗಿ, ಅಂಗನವಾಡಿ ಕಾರ್ಯಕರ್ತೆಯರಿಗೆ ಹಾಗೂ ಸಹಾಯಕಿಯರಿಗೆ ಶಿಶು ಅಭಿವೃದ್ಧಿ ಯೋಜನೇತರ ಕೆಲಸಗಳನ್ನು ನಿಯೋಜಿಸದಿರಲು ಕೇಂದ್ರ ಸರ್ಕಾರ ಸೂಚಿಸಿದೆ. ಇದರನ್ವಯ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಮುಖ್ಯಮಂತ್ರಿ ಸಹ ಒಪ್ಪಿಗೆ ಸೂಚಿಸಿದ್ದಾರೆ. ಹೀಗಾಗಿ, ಇನ್ನು ಮುಂದೆ ರಾಜ್ಯದ ಅಂಗನವಾಡಿ
ಕೇಂದ್ರಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ನೌಕರ ರನ್ನು ಶಿಶು ಅಭಿವೃದ್ಧಿ ಯೋಜನೇತರ ಕಾರ್ಯಗಳಿಗೆ ಬಳಸಿಕೊಳ್ಳಬಾರದು. ಇದರ ಬದಲಾಗಿ, ಆ ಪ್ರದೇಶದಲ್ಲಿಯೇ ವಾಸವಿರುವ ನಿವೃತ್ತ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಸೇವೆಯನ್ನು ಪಡೆಯಬಹುದು ಎಂದು ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ನಿರ್ದೇಶಕರು ಆದೇಶದಲ್ಲಿ ಸೂಚಿಸಿದ್ದಾರೆ.