Advertisement

ಅಂಗನವಾಡಿ ಕಾರ್ಯಕರ್ತೆಯರ ಮರು ನೇಮಕಕ್ಕೆ ಆಗ್ರಹಿಸಿ ಮುತ್ತಿಗೆ

04:07 PM Mar 07, 2017 | |

ಕಲಬುರಗಿ: ಜಿಲ್ಲೆಯಲ್ಲಿ ಈಗಾಗಲೇ ಹಲವು ಕಾರಣ ನೀಡಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳಿಂದ ತೆಗೆದು ಹಾಕಿರುವ 12 ಜನರನ್ನು ಪುನಃ ನೇಮಕಾತಿ ಮಾಡಿಕೊಳ್ಳಬೇಕು ಎಂದು ಒತ್ತಾಯಿಸಿ ಸೋಮವಾರ ನಗರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಕಚೇರಿಗೆ ಕರ್ನಾಟಕ ರಾಜ್ಯಅಂಗನವಾಡಿ ನೌಕರರ ಸಂಘದ ಸದಸ್ಯರು ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. 

Advertisement

ಕಳೆದ 20 ವರ್ಷಗಳಿಂದ ಕೆಲಸ ಮಾಡಿರುವ ಕಾರ್ಯಕರ್ತೆ ಹಾಗೂ ಸಹಾಯಕಿಯರನ್ನು ಸಣ್ಣ ಕಾರಣಿಗಳಿಗೆ ತೆಗೆದು ಹಾಕಿದರೆ ಅವರ ಜೀವನ ನಿರ್ವಹಣೆ ಕಷ್ಟವಾಗುವುದಿಲ್ಲವೇ? ಕೆಲಸದಿಂದ ತೆಗೆದು ಹಾಕಿದ ಕ್ರಮದ ಹಿಂದಿನ ಉದ್ದೇಶ ಮತ್ತು ಇಲಾಖೆ ತನಿಖೆ ನಡೆಸಲು ಆಗ್ರಹಿಸಿ ಪ್ರತಿಭಟನೆ ಮಾಡಿದ್ದೇವು. 

ಅದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಇಲಾಖೆ ಹಿರಿಯ ಅಧಿಕಾರಿಗಳು ಶಿಶು ಯೋಜನಾ ಅಭಿವೃದ್ಧಿ ಅಧಿಕಾರಿಗಳಿಗೆ ತನಿಖೆ ಮಾಡಿಸಿ 3 ತಿಂಗಳು ಆಗಿದೆ. ನೇಮಕಾತಿ ಆದೇಶ ನೀಡಬೇಕು ಎಂದು ಆಗ್ರಹಿಸಿದರು.

ರಾಜ್ಯ ಕಾರ್ಯದರ್ಶಿ ಶಾಂತಾ ಘಂಟಿ, ಗೌರಮ್ಮ ಪಾಟೀಲ, ಪ್ರಭಾವತಿ ಜಮಗಾ, ಸುಶೀಲ ಬಬಲಾದ, ಭಾರತಿ ಮಳನಿ, ಇಂದಿರಾ ಕವಲಗಾ, ಲಕ್ಷಿ ಉಪಾಸನಗರ, ಪುಷ್ಪಲತಾ ಮುಧೋಳ, ಮೈನಬಾಯಿ ಬೈರಂಪಳ್ಳಿ, ಕಲಾವತಿ ಕಲ್ಲೂರ, ಶಾಂತಾಬಾಯಿ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next