Advertisement

ಖರ್ಗೆ v/s ಅನಂತ್ : ಲೋಕಸಭೇಲಿ ಪ್ರತಿಧ್ವನಿಸಿದ ಅಂಗನವಾಡಿ ಹೋರಾಟ

04:39 PM Mar 23, 2017 | Sharanya Alva |

ನವದೆಹಲಿ: ಕನಿಷ್ಠ 10 ಸಾವಿರ ರೂ. ಮಾಸಿಕ ಗೌರವಧನಕ್ಕಾಗಿ ಒತ್ತಾಯಿಸಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಕಳೆದ ನಾಲ್ಕು ದಿನಗಳಿಂದ ನಗರದಲ್ಲಿ ನಡೆಸುತ್ತಿದ್ದ ಪ್ರತಿಭಟನೆ ಗುರುವಾರ ಲೋಕಸಭೆಯಲ್ಲೂ ಪ್ರತಿಧ್ವನಿಸಿದ್ದು, ಕಾಂಗ್ರೆಸ್ ಹಿರಿಯ ಮುಖಂಡ, ಸಂಸದ ಮಲ್ಲಿಕಾರ್ಜುನ ಖರ್ಗೆ ಅವರು ಗುರುವಾರ ಲೋಕಸಭೆಯಲ್ಲಿ ಶೂನ್ಯ ವೇಳೆಯ ಚರ್ಚೆಯ ವೇಳೆ ವಿಷಯ ಪ್ರಸ್ತಾಪಿಸಿ ಗಮನ ಸೆಳೆದರು.

Advertisement

ಕರ್ನಾಟಕದಲ್ಲಿ ಸಾವಿರಾರು ಅಂಗನವಾಡಿ ಕಾರ್ಯಕರ್ತೆಯರು ಗೌರವಧನ ಹೆಚ್ಚಳಕ್ಕೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಕೇಂದ್ರ ಸರ್ಕಾರ ಕೂಡಲೇ ಹಿಂದಿನ  90;10 ಅನುಪಾತವನ್ನೇ ಜಾರಿಗೆ ತರಬೇಕು. ಅವರಿಗೆ ಕೊಡುವ ಗೌರವಧನ ಹೆಚ್ಚಿಸಬೇಕು. ಅಲ್ಲದೇ ಕೇಂದ್ರ ಸರ್ಕಾರ ಅಂಗನವಾಡಿ ಕಾರ್ಯಕರ್ತೆಯರ ಹೋರಾಟವನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಖರ್ಗೆ ಮನವಿ ಮಾಡಿದರು.

ನಾವು ಕನಿಷ್ಠ ವೇತನದ ಬಗ್ಗೆ ಮಾತನಾಡುತ್ತೇವೆ. ಮಕ್ಕಳು ಉಚಿತ ಶಿಕ್ಷಣ ಪಡೆಯಬೇಕೆಂದು ಶಾಲೆಗೆ ಹೋಗುತ್ತಿದ್ದಾರೆ. ಹಾಗಾಗಿ ಅಂಗನವಾಡಿ ಕಾರ್ಯಕರ್ತೆಯರ ಕನಿಷ್ಠ ವೇತನದ ಬಗ್ಗೆ ಗಮನಹರಿಸಿಬೇಕಾಗಿದೆ. ಇದು ಕೇಂದ್ರ ಸರ್ಕಾರದ ಜವಾಬ್ದಾರಿ. ಅನುಪಾತದ ಬದಲಾವಣೆಯಿಂದಾಗಿ ದೇಶಾದ್ಯಂತ ಲಕ್ಷಾಂತರ ಜನರಿಗೆ ಅನ್ಯಾಯವಾಗುತ್ತಿದೆ ಎಂದು ದೂರಿದರು.

150 ಕೋಟಿ ರೂಪಾಯಿ ಎಲ್ಲಿ ಹೋಯ್ತು?; ಅನಂತ ಕುಮಾರ್ ತಿರುಗೇಟು
ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಮಾತನಾಡಿ ವಿಷಯ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಉತ್ತರ ನೀಡಿದ  ಸಂಸದೀಯ ವ್ಯವಹಾರಗಳ ಖಾತೆ ಸಚಿವ ಅನಂತ ಕುಮಾರ್, ಅಂಗನವಾಡಿ ಕಾರ್ಯಕರ್ತೆಯರ ವಿಚಾರದಲ್ಲಿ ಬಿಜೆಪಿ ಏನೂ ಮಾಡಿಲ್ಲ ಎಂಬುದು ಸತ್ಯಕ್ಕೆ ದೂರವಾದ ವಿಚಾರ. ಕೇಂದ್ರ ಸರ್ಕಾರ ಅಂಗನವಾಡಿ ಕಾರ್ಯಕರ್ತೆಯರಿಗಾಗಿ ನೀಡಿದ್ದನ್ನು ರಾಜ್ಯ ಸರ್ಕಾರವೇ ನೀಡಿಲ್ಲ ಎಂದು ತಿರುಗೇಟು ನೀಡಿದರು.

Advertisement

ಖರ್ಗೆಜೀ ಸತ್ಯವನ್ನು ಮರೆಮಾಚಿ ಸದನಕ್ಕೆ ತಪ್ಪು ಮಾಹಿತಿ ನೀಡುತ್ತಿದ್ದಾರೆ ಎಂದು ಹೇಳಿದರು. ಈ ವಿಚಾರದಲ್ಲಿ ಮೊಸಳೆ ಕಣ್ಣೀರು ಸುರಿಸಬೇಡಿ ಎಂದಾಗ ಕಾಂಗ್ರೆಸ್ ಸಂಸದರು ತೀವ್ರ ವಿರೋಧ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದರು.

65 ಸಾವಿರ ಹುದ್ದೆಗಳನ್ನು ನೀವು ಭರ್ತಿ ಮಾಡಿದ್ದೀರಾ. 2015-16ನೇ ಸಾಲಿನಲ್ಲಿ ಐಸಿಡಿಎಸ್ ನಲ್ಲಿ 162 ಕೋಟಿ ರೂಪಾಯಿ ನೀಡಲಾಗಿತ್ತು. ಇದರಲ್ಲಿ 150 ಕೋಟಿ ರೂಪಾಯಿ ಎಲ್ಲಿಗೆ ಹೋಗಿದೆ?ಹಣ ಹೇಗೆ ನಾಪತ್ತೆಯಾಯಿತೆಂದು ಕರ್ನಾಟಕ ಸರ್ಕಾರಕ್ಕೆ ಕೇಂದ್ರ ಸರ್ಕಾರ ಪತ್ರ ಬರೆದಿದೆ. ಆದರೆ 150 ಕೋಟಿ ರೂ. ಎಲ್ಲಿ ಖರ್ಚು ಮಾಡಿದೆ ಎಂಬ ಬಗ್ಗೆ ವಿವರಣೆ ನೀಡಿಲ್ಲ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next