Advertisement

ಅಂಗನವಾಡಿ ಕಾರ್ಯಕರ್ತೆಯರ ವಿರುದ್ಧ ಎಫ್ಐಆರ್‌ ದಾಖಲು

03:45 AM Mar 25, 2017 | Team Udayavani |

ಬೆಂಗಳೂರು: ಬೇಡಿಕೆಗಳ  ಈಡೇರಿಕೆಗಾಗಿ ನಾಲ್ಕು ದಿನಗಳ ಕಾಲ ಬೆಂಗಳೂರಿನಲ್ಲಿ ಅಹೋರಾತ್ರಿ ಧರಣಿ ನಡೆಸಿದ ಅಂಗನವಾಡಿ ಕಾರ್ಯಕರ್ತೆಯರ ಸಂಘಧ ಅಧ್ಯಕ್ಷೆ ಸೇರಿದಂತೆ 6 ಮಂದಿ ವಿರುದ್ಧ ಉಪ್ಪಾರಪೇಟೆ ಪೊಲೀಸರು ಎಫ್ಐಆರ್‌ ದಾಖಲಿಸಿದ್ದಾರೆ.

Advertisement

ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಸಂಘದ ಅಧ್ಯಕ್ಷೆ ಎಸ್‌. ವರಲಕ್ಷಿ$¾à, ಕಾರ್ಯಾಧ್ಯಕ್ಷೆ ಶಾಂತಾ ಎನ್‌.ಘಂಟಿ, ಪ್ರಧಾನ ಕಾರ್ಯದರ್ಶಿ ಎಚ್‌.ಎಸ್‌. ಸುನಂದಾ, ಖಜಾಂಚಿ ಜಿ. ಕಮಲಾ, ಯಮುನಾ ಗಾಂಟ್ವಾಳ, ಲಕ್ಷಿ$¾àದೇವಮ್ಮ ಹಾಗೂ ಇತರರ ವಿರುದ್ಧ ಐಪಿಸಿ ಸೆಕ್ಷನ್‌ 188(ಸರ್ಕಾರಿ ಅಧಿಕಾರಿಯ ಆದೇಶ ಪಾಲಿಸದಿರುವುದು) ಮತ್ತು ಕರ್ನಾಟಕ ಪೊಲೀಸ್‌ ಕಾಯ್ದೆ 34 (ಎ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಅಂಗನವಾಡಿ ಕಾರ್ಯಕರ್ತೆಯರು ಮಾ.20ರಂದು ರೈಲ್ವೆ ನಿಲ್ದಾಣದಿಂದ ಫ್ರೀಡಂಪಾರ್ಕವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲು ಅನುಮತಿ ಕೇಳಿದ್ದರು. ಅದರಂತೆ ಅನುಮತಿ ಕೂಡ ನೀಡಲಾಗಿತ್ತು.

ಆದರೆ, ಪ್ರತಿಭನೆಯ ದಿನ ಅಂಗನವಾಡಿ ಕಾರ್ಯಕರ್ತೆಯರು ಏಕಾಏಕಿ ಶೇಷಾದ್ರಿ ರಸ್ತೆಯಲ್ಲಿ ಧರಣಿ ಕುಳಿತು ರಸ್ತೆ ತಡೆ ನಡೆಸಿದ್ದಾರೆ. ಪೊಲೀಸ್‌ ಅಧಿಕಾರಿಗಳು ರಸ್ತೆ ತಡೆ ನಡೆಸದಂತೆ ಸೂಚಿಸಿದ್ದರು. ಆದರೂ ರಸ್ತೆ ತಡೆದು ಸಾರ್ವಜನಿಕರ ಓಡಾಟಕ್ಕೆ ಅಡ್ಡಿಪಡಿಸಿದ್ದಾರೆ. ಅಲ್ಲದೇ ಅನುಮತಿ ಪಡೆಯದೇ ಕಾನೂನು ಬಾಹಿರವಾಗಿ ನಾಲ್ಕು ದಿನಗಳ ನಿರಂತರ ಹೋರಾಟ ನಡೆಸಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಹಿರಿಯ ಪೊಲೀಸ್‌ ಅಧಿಕಾರಿಯೊಬ್ಬರು “ಉದಯವಾಣಿ’ಗೆ ತಿಳಿಸಿದ್ದಾರೆ.

“ಪೊಲೀಸ್‌ ನಿಯಮ ಉಲ್ಲಂ ಸಿದ್ದರಿಂದ “ದಂಡನಾರ್ಹ ಅಪರಾಧ’ ಪ್ರಕರಣ ದಾಖಲಿಸಲಾಗಿದೆಯೇ ಹೊರತು, ಸರ್ಕಾರ ಅಥವಾ ಯಾವುದೇ ವ್ಯಕ್ತಿಯ ಒತ್ತಡಕ್ಕೆ ಮಣಿದು ಅಂಗನವಾಡಿ ಕಾರ್ಯಕರ್ತೆಯರ ಸಂಘದ ಪದಾಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಿಲ್ಲ. ನಿಯಮ ಉಲ್ಲಂ ನೆ ಆರೋಪದ ಮೇಲೆ ಐಪಿಸಿ ಸೆಕ್ಷನ್‌ 188 ಹಾಗೂ ಕರ್ನಾಟಕ ಪೊಲೀಸ್‌ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಡಿಸಿಪಿ ಎಂ.ಎನ್‌.ಅನುಚೇತ್‌ ಸ್ಪಷ್ಟಪಡಿಸಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next