Advertisement

ಅಂಗನವಾಡಿ ನೌಕರರ ಬೇಡಿಕೆ ಈಡೇರಿಕೆಗೆ ಆಗ್ರಹ

12:32 PM Dec 31, 2019 | Team Udayavani |

ಶಹಾಪುರ: ಅಂಗನವಾಡಿ ನೌಕರರ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಇಲ್ಲಿನ ಸಿಐಟಿಯು ನೇತೃತ್ವದಲ್ಲಿ ತಹಶೀಲ್ದಾರ್‌ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.

Advertisement

ಡಿ.10ರಂದು ಅಂಗನವಾಡಿ ಕಾರ್ಯಕರ್ತೆಯರು ಕೈಗೊಂಡಿದ್ದ ಪಾದಯಾತ್ರೆ ಸಂದರ್ಭದಲ್ಲಿ ರಾಜ್ಯ ಸರ್ಕಾರಕ್ಕೆ ನೀಡಿದ ಮನವಿ ಮೇರೆಗೆ ಶೀಘ್ರದಲ್ಲಿ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾನಿರತರು ಆಗ್ರಹಿಸಿದ್ದರು. ಅಲ್ಲದೇ ಇತ್ತೀಚೆಗೆ ರಾಜ್ಯ ಅಂಗನವಾಡಿ ನೌಕರರ ಸಂಘ (ಸಿಐಟಿಯು ಸಂಯೋಜಿತ) ರಾಜ್ಯ ಸಮಿತಿ ಶಾಲಾ ಪೂರ್ವ ಶಿಕ್ಷಣ ಅಂಗನವಾಡಿಗಳನ್ನು ಉಳಿಸಿ ಮತ್ತು ಇತರೆ ಬೇಡಿಕೆ ಈಡೇರಿಸಬೇಕೆಂದು ಆಗ್ರಹಿಸಿ ತುಮಕೂರಿನಿಂದ ಬೆಂಗಳೂರಿನವರೆಗೆ ಪಾದಯಾತ್ರೆ ಹಮ್ಮಿಕೊಂಡಿತ್ತು.

ಆ ಸಂದರ್ಭದಲ್ಲಿ ಹಲವು ನಿರ್ಣಯ ಕೈಗೊಂಡ ಸಂಘ, ರಾಜ್ಯ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿತ್ತು. ಭಾರತದ ಸಂವಿಧಾನವು ತನ್ನ ನಾಗರಿಕರ ಹಿತ ಕಾಯುವಂತಿದ್ದು, ಪ್ರತಿಭಟನಾವನ್ನು ಹತ್ತಿಕ್ಕಬಾರದು ಎಂದು ಕಾರ್ಯಕರ್ತರು ಮನವಿ ಮಾಡಿದರು. ಈ ಸಂದರ್ಭದಲ್ಲಿ ಬಸವಲಿಂಗಮ್ಮ ನಾಟೇಕಾರ, ಯಮುನಪ್ಪ ಕಸನ್‌, ಸಿ.ಎಸ್‌. ಕಲಾವತಿ, ರೇಣುಕಾ ಗೋಗಿ, ಬಸಮ್ಮ ಐಕೂರ ಸೇರಿದಂತೆ ಇತರರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next