Advertisement

ದೇಶಾದ್ಯಂತ ಅಂಗನವಾಡಿ ಕಾರ್ಯಕರ್ತೆಯರಿಗೆ ತರಬೇತಿ

07:00 AM Sep 01, 2017 | |

ಹೊಸದಿಲ್ಲಿ: ಪ್ರೀ ಸ್ಕೂಲ್‌ ಶಿಕ್ಷಣ ನೀಡಲು ದೇಶಾದ್ಯಂತ ಅಂಗನವಾಡಿ ಕಾರ್ಯಕರ್ತೆಯರಿಗೆ ತರಬೇತಿ ನೀಡಲು ಕೇಂದ್ರ ಸರಕಾರ ಮುಂದಾಗಿದೆ. 3ರಿಂದ 6 ವರ್ಷದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವ ನಿಟ್ಟಿನಲ್ಲಿ ಈ ಯೋಜನೆ ಜಾರಿಗೊಳಿಸುತ್ತಿದೆ. ಮಕ್ಕಳ ಅಭಿವೃದ್ಧಿ ಸೇವಾ (ಐಸಿಡಿಎಸ್‌) ಯೋಜನೆ ಅಡಿ ಇದನ್ನು ಜಾರಿಗೊಳಿಸಲಾಗುತ್ತಿದ್ದು, ಗುಣಮಟ್ಟದ ಆಹಾರ, ಪ್ರಾಥಮಿಕ ಆರೋಗ್ಯ ಕಾಪಾಡಿಕೊಳ್ಳುವ ವಿಚಾರವಾಗಿ ತಾಯಂದಿರಲ್ಲಿ ಜಾಗೃತಿ ಮೂಡಿಸುವುದೂ ಯೋಜನೆಯ ಉದ್ದೇಶಗಳಲ್ಲಿ ಒಂದಾಗಿದೆ.

Advertisement

ಈ ಬಗ್ಗೆ ಪ್ರತಿಕ್ರಿಯಿಸಿರುವ ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಮೇನಕಾ ಗಾಂಧಿ, “”ಪ್ರೀ ಸ್ಕೂಲ್‌ ಶಿಕ್ಷಣ ನೀಡುವ ಹಂತದಲ್ಲಿ ಆಹಾರ ಪೂರೈಕೆ ಬಹಳ ಮಹತ್ವದ್ದಾಗಿರಲಿದೆ. ಪ್ರತಿಯೊಬ್ಬ ಅಂಗನವಾಡಿ ಕಾರ್ಯಕರ್ತೆಯರಿಗೆ ಈ ತರಬೇತಿ ಮಹತ್ವದ್ದಾಗಿದೆ” ಎಂದಿದ್ದಾರೆ. ಸಚಿವಾಲಯದ ಮೂಲಗಳ ಪ್ರಕಾರ, ಅಂಗನವಾಡಿ ಮಕ್ಕಳಿಗೆ ಆಹಾರ ಪೂರೈಕೆ ವಿಧಾನವನ್ನೇ ಬದಲಾಯಿಸುವ ಸಾಧ್ಯತೆ ಇದೆ. 

Advertisement

Udayavani is now on Telegram. Click here to join our channel and stay updated with the latest news.

Next