Advertisement
ದ.ಕ. ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ಸೋಮವಾರ ನಡೆದ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಮಾಸಿಕ ಸಮೀಕ್ಷಾ ಸಭೆಯಲ್ಲಿ ಅವರು ಮಾತನಾಡಿದರು. ಬಾಕಿ ಇರುವ ಅಂಗನವಾಡಿ ಕಾಮಗಾರಿಗಳ ಕುರಿತು ಪರಿಶೀಲನೆ ನಡೆಸಲಾಯಿತು. ಇದರಲ್ಲಿ ಕೆಲವು ಅಂಗನವಾಡಿ ಕೇಂದ್ರಗಳು ಪೂರ್ಣಗೊಂ ಡಿದ್ದು, ಇನ್ನೂ ಕೆಲವು ಅಂಗನವಾಡಿ ಕೇಂದ್ರಗಳ ಕಾಮಗಾರಿ ಬಾಕಿ ಉಳಿದುಕೊಂಡಿದೆ. ಈ ಕುರಿತು ಸಭೆಯಲ್ಲಿ ಚರ್ಚೆ ನಡೆಸಲಾಯಿತು.
Related Articles
Advertisement
ಗ್ರಾಮೀಣ ಕಾರ್ಮಿಕರಿಗಾಗಿ ವಿಶೇಷ ಕಾರ್ಯಕ್ರಮಗಳಡಿ ವಿವಿಧ ಯೋಜನೆಗಳಿದ್ದು, ಜಿಲ್ಲೆಯಲ್ಲಿ ಒಟ್ಟು 60 ಸಾವಿರ ಕಟ್ಟಡ ಕಾರ್ಮಿಕರ ನೋಂದಣಿ ನಡೆದಿರುತ್ತದೆ ಎಂದು ಕಾರ್ಮಿಕ ಇಲಾಖೆ ಅಧಿಕಾರಿ ತಿಳಿಸಿದರು. ಕಟ್ಟಡ ಕಾರ್ಮಿಕ ಯೋಜನೆಯಡಿ ಶೈಕ್ಷಣಿಕ, ಆರೋಗ್ಯ, ಪಿಂಚಣಿ ರೂಪದಲ್ಲಿ ಧನಸಹಾಯ ಮಾಡಲಾಗುತ್ತದೆ. ಶೇ. 100 ಸಾಧನೆಯಾಗಿರುತ್ತದೆ ಎಂದರು.
ಜಿಲ್ಲೆಯಲ್ಲಿನ ಜನವರಿಯಲ್ಲಿ ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿ ಶೇ. 81ರಷ್ಟು ಸಾಧನೆ, ಬಸವ ವಸತಿ ಯೋಜನೆ ಯಡಿ ಜಿಲ್ಲೆಯಲ್ಲಿ ಶೇ.18.58ರಷ್ಟು ಸಾಧನೆ, ಪ್ರಧಾನ್ ಮಂತ್ರಿ ಆವಾಸ್ ಯೋಜನೆಯಡಿ ಶೇ. 9.52 ಸಾಧನೆಯಾಗಿದ್ದು ಈ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.
ಜಿ.ಪಂ. ಉಪಾಧ್ಯಕ್ಷೆ ಕಸ್ತೂರಿ ಪಂಜ, ಕೃಷಿ ಮತ್ತು ಕೈಗಾರಿಕಾ ಸ್ಥಾಯೀ ಸಮಿತಿ ಅಧ್ಯಕ್ಷ ರವೀಂದ್ರ ಕಂಬಳಿ, ಸಾಮಾಜಿಕ ನ್ಯಾಯ ಸ್ಥಾಯೀ ಸಮಿತಿ ಅಧ್ಯಕ್ಷೆ ಮಮತಾ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.
ಪ್ರಧಾನಮಂತ್ರಿ ಉದ್ಯೋಗ ಸೃಜನ ಕಾರ್ಯಕ್ರಮದಡಿಯಲ್ಲಿ 54 ಅರ್ಜಿಗಳು, ಮುಖ್ಯಮಂತ್ರಿಗಳ ಉದ್ಯೋಗ ಸೃಜನ ಕಾರ್ಯಕ್ರಮದಡಿ 57 ಅರ್ಜಿಗಳು ಆಯ್ಕೆಯಾಗಿ ಬ್ಯಾಂಕಿಗೆ ಆನ್‌ಲೈನ್ ಮೂಲಕ ಶಿಫಾರಸು ಮಾಡಲಾಗಿರುತ್ತದೆ. ಬಂಡವಾಳ ಹೂಡಿಕೆ ಸಹಾಯಧನ ಯೋಜನೆ ಯಡಿ ಬ್ಯಾಂಕ್‌ಗಳಿಗೆ ಪ್ರಸ್ತಾವನೆ ಹೋಗಿದ್ದು, ಎಲ್ಲ ಬ್ಯಾಂಕ್‌ಗಳ ಪಟ್ಟಿ ಮಾಡಿ ಲೀಡ್ ಬ್ಯಾಂಕ್ ವ್ಯವಸ್ಥಾಪಕರ ಗಮನಕ್ಕೆ ತರುವಂತೆ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಧಿಕಾರಿಗಳಿಗೆ ಸೂಚಿಸಿದರು.