Advertisement

Bangla ಹಿಂದೂಗಳ ಮೇಲಿನ ದಾಳಿಗೆ ರಾಜ್ಯದ ಹಲವೆಡೆ ಭುಗಿಲೆದ್ದ ಆಕ್ರೋಶ

11:15 PM Aug 12, 2024 | Team Udayavani |

ಬೆಂಗಳೂರು: ಬಾಂಗ್ಲಾ ದೇಶದಲ್ಲಿ ಹಿಂದೂಗಳ ಮೇಲಿನ ದಾಳಿ ಖಂಡಿಸಿ ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರು ರಾಜ್ಯದ ವಿವಿಧೆಡೆ ಸೋಮವಾರ ಪ್ರತಿಭಟನೆ ನಡೆಸಿ, ಬಾಂಗ್ಲಾ ಹಿಂದೂಗಳ ಸಹಾಯಕ್ಕೆ ಭಾರತ ಸರಕಾರ, ವಿಶ್ವ ಸಮುದಾಯ ಧಾವಿಸುವಂತೆ ಆಗ್ರಹಿಸಿದರು. ಬಾಂಗ್ಲಾ ಹಿಂದೂಗಳ ಮೇಲಿನ ದಾಳಿಗೆ ಪೇಜಾವರ ಮಠಾಧೀಶರಾದ ವಿಶ್ವಪ್ರಸನ್ನತೀರ್ಥ ಶ್ರೀಪಾದರು, ಉಡುಪಿ ಪರ್ಯಾಯ ಪುತ್ತಿಗೆ ಮಠಾಧೀಶ ಸುಗುಣೇಂದ್ರತೀರ್ಥ ಶ್ರೀಪಾದರು ಕಳವಳ ವ್ಯಕ್ತಪಡಿಸಿದ್ದು, ಇಡೀ ಹಿಂದೂ ಸಮಾಜ ಜಾಗೃತವಾಗಬೇಕು ಎಂದು ಪ್ರತಿಕ್ರಿಯಿಸಿದ್ದಾರೆ.

Advertisement

ಮೈಸೂರಿನಲ್ಲಿ ಹಿಂದೂ ಹಿತರಕ್ಷಣ ಸಮಿತಿ ವತಿಯಿಂದ ನಗರದ ಹಲವು ವೃತ್ತಗಳಲ್ಲಿ ಮೌನ ಪ್ರತಿಭಟನೆ ನಡೆಸಿ, ಭಿತ್ತಿ ಪತ್ರ ಪ್ರದರ್ಶಿಸುವ ಮೂಲಕ ಹಿಂದೂಗಳ ಮೇಲಿನ ದಾಳಿ ಖಂಡಿಸಲಾಯಿತು. ಬಸ್‌ ನಿಲ್ದಾಣದಲ್ಲಿ ನಡೆದ ಪ್ರತಿಭಟನೆಯಲ್ಲಿ ಶಾಸಕ ಟಿ.ಎಸ್‌. ಶ್ರೀವತ್ಸ ಭಾಗವಹಿಸಿದ್ದರು. ಹಾಸನ, ಮಂಡ್ಯದಲ್ಲೂ ಪ್ರತಿಭಟನೆ ನಡೆದಿದ್ದು, ಮದ್ದೂರು, ಶ್ರೀರಂಗಪಟ್ಟಣದಲ್ಲಿ ವಿಶ್ವಹಿಂದೂ ಪರಿಷತ್‌, ಬಜರಂಗದಳ ಮತ್ತು ಹಿಂದೂಪರ ಸಂಘಟನೆ ಕಾರ್ಯಕರ್ತರು ತಾಲೂಕು ಕಚೇರಿ ಬಳಿ ಪ್ರತಿಭಟನೆ ನಡೆಸಿದರು. ಕೋಲಾರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಹಿಂದೂಗಳ ಮೇಲಿನ ಹಲ್ಲೆ ತಡೆಗೆ ವಿಶ್ವಸಂಸ್ಥೆ ಮುಂದಾಗಲಿ ಎಂದು ವಿಶ್ವಹಿಂದೂ ಪರಿಷತ್‌, ಹಿಂದೂ ಜಾಗರಣಾ ವೇದಿಕೆ ಪದಾಧಿಕಾರಿಗಳು ಅಗ್ರಹಿಸಿದರು.

ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರುವ ದೌರ್ಜನ್ಯ ಖಂಡಿಸಿ ಹಾಗೂ ಅವರ ಸುರಕ್ಷೆಗೆ ಕ್ರಮ ಕೈಗೊಳ್ಳಲು ಆಗ್ರಹಿಸಿ, ಮಂಗಳೂರಿನ ಜನಜಾಗೃತಿಗಾಗಿ ಹಿಂದೂ ಹಿತರಕ್ಷಣ ಸಮಿತಿ ನೇತೃತ್ವದಲ್ಲಿ ನಗರದ ಮಿನಿ ವಿಧಾನಸೌಧ ಮುಂಭಾಗ ಮಾನವ ಸರಪಳಿ ರಚಿಸಿ ಪ್ರತಿಭಟನೆ ನಡೆಸಲಾಯಿತು. ಸಂಸದ ಕ್ಯಾ| ಬ್ರಿಜೇಶ್‌ ಚೌಟ, ಶಾಸಕರಾದ ವೇದವ್ಯಾಸ ಕಾಮತ್‌, ಡಾ| ವೈ. ಭರತ್‌ ಶೆಟ್ಟಿ ಇನ್ನಿತರರು ಪಾಲ್ಗೊಂಡಿದ್ದರು. ಹಿಂದೂ ಹಿತರಕ್ಷಣೆ ವೇದಿಕೆ ವತಿಯಿಂದ ಸೋಮವಾರ ಸಂಜೆ ಉಡುಪಿ ನಗರದಲ್ಲಿ ಮಾನವ ಸರಪಳಿ ರಚಿಸಲಾಯಿತು. ಕಲ್ಸಂಕದಿಂದ ಆರಂಭಗೊಂಡು ಕಡಿಯಾಳಿ, ಸಿಟಿ ಬಸ್‌ ನಿಲ್ದಾಣದವರೆಗೂ ಮಾನವ ಸರಪಳಿ ರಚಿಸಿ, ಭಿತ್ತಿ ಪತ್ರ ಪ್ರದರ್ಶಿಸಿ, ಬಾಂಗ್ಲಾ ಹಿಂಸೆಗೆ ಖಂಡನೆ ವ್ಯಕ್ತಪಡಿಸಲಾಯಿತು.

Advertisement

Udayavani is now on Telegram. Click here to join our channel and stay updated with the latest news.

Next