Advertisement

Congress ಶ್ರೀನಿವಾಸ್ ಬಂಧನಕ್ಕಾಗಿ ಅಸ್ಸಾಂ ಪೊಲೀಸರ ತಂಡ ಕರ್ನಾಟಕಕ್ಕೆ

10:49 PM Apr 22, 2023 | Team Udayavani |

ನವದೆಹಲಿ: ಕಾಂಗ್ರೆಸ್ ಪಕ್ಷದಿಂದ ಅಮಾನತುಗೊಂಡಿರುವ ಅಸ್ಸಾಂ ಘಟಕದ ಯುವ ಕಾಂಗ್ರೆಸ್ ಮುಖ್ಯಸ್ಥೆಯಾಗಿದ್ದ ಅಂಕಿತಾ ದತ್ತಾ ಅವರು ಕಿರುಕುಳದ ದೂರು ದಾಖಲಿಸಿದ ಬಳಿಕ ಯುವ ಕಾಂಗ್ರೆಸ್‌ನ ರಾಷ್ಟ್ರೀಯ ಅಧ್ಯಕ್ಷ ಶ್ರೀನಿವಾಸ್ ಬಿವಿ ಅವರನ್ನು ಬಂಧಿಸಲು ಅಸ್ಸಾಂ ಪೊಲೀಸರ ತಂಡ ಶನಿವಾರ ಕರ್ನಾಟಕಕ್ಕೆ ಹೊರಟಿದೆ ಎಂದು ಸುದ್ದಿ ಸಂಸ್ಥೆ ಐಎಎನ್‌ಎಸ್ ವರದಿ ಮಾಡಿದೆ.

Advertisement

ಶ್ರೀನಿವಾಸ್ ಬಿವಿ ವಿರುದ್ಧ ದಿಸ್ಪುರ್ ಪೊಲೀಸ್ ಠಾಣೆಯಲ್ಲಿ ಭಾರತೀಯ ದಂಡ ಸಂಹಿತೆಯ (IPC) ಸೆಕ್ಷನ್ 509, 294, 341, 352, 354, 354A ಮತ್ತು 506 ಜೊತೆಗೆ ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 67 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಶ್ರೀನಿವಾಸ್‌ರನ್ನು ಬಂಧಿಸಲು ಅಸ್ಸಾಂ ಪೊಲೀಸರ ನಾಲ್ವರು ಸದಸ್ಯರ ತಂಡವನ್ನು ಕರ್ನಾಟಕಕ್ಕೆ ಕಳುಹಿಸಲಾಗಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಐಎಎನ್‌ಎಸ್ ವರದಿ ಮಾಡಿದೆ.

ಅಸ್ಸಾಂ ಡಿಜಿಪಿ ಜಿ.ಪಿ. ಸಿಂಗ್ ಈ ಬೆಳವಣಿಗೆಯನ್ನು ಖಚಿತಪಡಿಸಿದ್ದಾರೆ. ಆದರೆ, ಅವರು ಯಾವುದೇ ಹೆಚ್ಚಿನ ವಿವರಗಳನ್ನು ಬಹಿರಂಗಪಡಿಸಲು ನಿರಾಕರಿಸಿದ್ದಾರೆ ಎಂದು ಐಎಎನ್ಎಸ್ ಹೇಳಿದೆ.

Advertisement

Udayavani is now on Telegram. Click here to join our channel and stay updated with the latest news.

Next