ಪಾಟ್ನಾ: ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ್ ಯಾದವ್ ಅವರ ಪಾಟ್ನಾ ನಿವಾಸದ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದ ಸಂದರ್ಭದಲ್ಲಿ ಪ್ರತಿಭಟನೆ ನಡೆಸಿದ ಪಕ್ಷದ ಕಾರ್ಯಕರ್ತರು, ಬೆಂಬಲಿಗರ ವಿರುದ್ಧ ರಾಬ್ರಿ ದೇವಿ ಆಕ್ರೋಶ ವ್ಯಕ್ತಪಡಿಸಿ ಕಪಾಳಮೋಕ್ಷ ಮಾಡಿದ ಘಟನೆ ನಡೆದಿರುವುದಾಗಿ ವರದಿ ತಿಳಿಸಿದೆ.
ಇದನ್ನೂ ಓದಿ:ಐಪಿಎಲ್ 2022: ಈ ಮೂವರು ವೇಗಿಗಳು ಕಮಾಲ್ ಮಾಡಿದ್ದಾರೆಂದ ದಿನೇಶ್ ಕಾರ್ತಿಕ್
ಮೇವು ಹಗರಣಕ್ಕೆ ಸಂಬಂಧಿಸಿದಂತೆ ಲಾಲು ಪ್ರಸಾದ್ ಯಾದವ್ ಮತ್ತು ಕುಟುಂಬ ಸದಸ್ಯರ ವಿರುದ್ಧ ಸಿಬಿಐ ಹೊಸದಾಗಿ ಭ್ರಷ್ಟಾಚಾರ ಪ್ರಕರಣ ದಾಖಲಿಸಿದ ನಂತರ ರಾಬ್ರಿ ದೇವಿ ನಿವಾಸ ಸೇರಿದಂತೆ ಹಲವಾರು ಸ್ಥಳಗಳಲ್ಲಿ ಸಿಬಿಐ ದಾಳಿ ನಡೆಸಿತ್ತು.
ಈ ಸಂದರ್ಭದಲ್ಲಿ ರಾಷ್ಟ್ರೀಯ ಜನತಾ ದಳದ ಬೆಂಬಲಿಗರು, ಕಾರ್ಯಕರ್ತರು ಸಿಬಿಐ ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿ,ಪ್ರತಿಭಟನೆ ನಡೆಸಿದರು. ರಾಬ್ರಿದೇವಿ ನಿವಾಸದ ಹೊರಭಾಗದಲ್ಲಿದ್ದು, ಪ್ರತಿಭಟನೆ ನಡೆಸದಂತೆ ಮನವಿ ಮಾಡಿಕೊಂಡಿದ್ದರು. ಆದರೆ ಘೋಷಣೆ ಮುಂದುವರಿದಾಗ ತಾಳ್ಮೆ ಕಳೆದುಕೊಂಡ ರಾಬ್ರಿ ದೇವಿ ಪಕ್ಷದ ಕೆಲವು ಕಾರ್ಯಕರ್ತರಿಗೆ ಕಪಾಳಮೋಕ್ಷ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
Related Articles
ಸಿಬಿಐ ಅಧಿಕಾರಿಗಳು ಲಾಲುಪ್ರಸಾದ್ ಯಾದವ್, ಪತ್ನಿ ರಾಬ್ರಿ ದೇವಿ, ಪುತ್ರಿಯರಾದ ಮೀಸಾ ಹಾಗೂ ಹೇಮಾ ಮತ್ತು ಇತರರ ವಿರುದ್ಧ ಎಫ್ ಐಆರ್ ದಾಖಲಿಸಿದ್ದರು. ಈ ನಿಟ್ಟಿನಲ್ಲಿ ಶುಕ್ರವಾರ ಬೆಳಗ್ಗೆ ದೆಹಲಿ, ಪಾಟ್ನಾ ಮತ್ತು ಗೋಪಾಲ್ ಗಂಜ್ ಸೇರಿದಂತೆ ಸುಮಾರು 16 ಸ್ಥಳಗಳಲ್ಲಿ ದಾಳಿ ನಡೆಸಿ ಶೋಧ ಕಾರ್ಯ ನಡೆಸಿದ್ದರು ಎಂದು ವರದಿ ತಿಳಿಸಿದೆ.