ಮುಂಬೈ: ಉದ್ಯಮಿ ಅನಿಲ್ ಅಂಬಾನಿ ಅವರ ಪತ್ನಿ ಟೀನಾ ಅಂಬಾನಿ ಇಂದು ವಿದೇಶಿ ವಿನಿಮಯ ಉಲ್ಲಂಘನೆ ಆರೋಪದ ಮೇಲೆ ಜಾರಿ ನಿರ್ದೇಶನಾಲಯದ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ.
ರಿಲಯನ್ಸ್ ಎಡಿಎ ಗ್ರೂಪ್ ಅಧ್ಯಕ್ಷ ಅನಿಲ್ ಅಂಬಾನಿ ಸೋಮವಾರ ಜಾರಿ ನಿರ್ದೇಶನಾಲಯದ ಮುಂದೆ (ಇಡಿ) ವಿದೇಶಿ ವಿನಿಮಯ ಕಾಯಿದೆಯ ಉಲ್ಲಂಘನೆಯ ತನಿಖೆಗೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗಿದ್ದರು. ಇದಾದ ಒಂದು ದಿನದ ಬಳಿಕ ಅವರ ಪತ್ನಿ ವಿಚಾರಣೆಗೆ ಹಾಜರಾಗಿದ್ದಾರೆ.
ಉದ್ಯಮಿ ಅನಿಲ್ ಅಂಬಾನಿ ಅವರ ಪತ್ನಿ ಟೀನಾ ಅಂಬಾನಿ 1999 ರ ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ (ಫೆಮಾ) ಅಡಿಯಲ್ಲಿ ದಾಖಲಾಗಿರುವ ವಿದೇಶಿ ವಿನಿಮಯ ಉಲ್ಲಂಘನೆ ಪ್ರಕರಣದಲ್ಲಿ ಹಾಜರಾಗಿದ್ದಾರೆ ಎಂದು ತಿಳಿದು ಬಂದಿದೆ.
ಅನಿಲ್ ಅಂಬಾನಿ ಅವರು ಈ ಹಿಂದೆ 2020 ರಲ್ಲಿ ಯೆಸ್ ಬ್ಯಾಂಕ್ ಪ್ರವರ್ತಕ ರಾಣಾ ಕಪೂರ್ ಮತ್ತು ಇತರರ ವಿರುದ್ಧ ಮನಿ ಲಾಂಡರಿಂಗ್ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದ ಮುಂದೆ ಹಾಜರಾಗಿದ್ದರು.
ಎರಡು ಸ್ವಿಸ್ ಬ್ಯಾಂಕ್ ಖಾತೆಗಳಲ್ಲಿ ರೂ. 814 ಕೋಟಿಗೂ ಅಧಿಕ ಮೊತ್ತದ ಅಘೋಷಿತ ಹಣದ ಮೇಲಿನ ರೂ. 420 ಕೋಟಿ ತೆರಿಗೆ ವಂಚನೆ ಆರೋಪದ ಮೇಲೆ ಕಳೆದ ವರ್ಷ ಆಗಸ್ಟ್‌ನಲ್ಲಿ ಆದಾಯ ತೆರಿಗೆ ಇಲಾಖೆ ಅನಿಲ್ ಅಂಬಾನಿ ಅವರಿಗೆ ಕಪ್ಪುಹಣ ತಡೆ ಕಾಯ್ದೆಯಡಿ ನೋಟಿಸ್ ಜಾರಿ ಮಾಡಿತ್ತು.
ಇದನ್ನೂ ಓದಿ: ಚಿಕ್ಕಮಗಳೂರು: ಭಾರಿ ಮಳೆಗೆ ಧರೆಗುರುಳಿದ ಮರ… 2 ಗಂಟೆಗಳ ಕಾಲ ರಸ್ತೆ ಸಂಚಾರ ಬಂದ್