ನವದೆಹಲಿ: ಮಾಜಿ ರಕ್ಷಣಾ ಸಚಿವ ಎಕೆ ಆ್ಯಂಟನಿ ಅವರ ಪುತ್ರ ಅನಿಲ್ ಆ್ಯಂಟನಿ ಕಾಂಗ್ರೆಸ್ ತೊರೆದ ನಂತರ ಗುರುವಾರ ಬಿಜೆಪಿ ಸೇರ್ಪಡೆಯಾಗಿದ್ದಾರೆ.
ಬಿಜೆಪಿ ಹಿರಿಯ ನಾಯಕರು, ಕೇಂದ್ರ ಸಚಿವರಾದ ಪಿಯೂಷ್ ಗೋಯಲ್ ಮತ್ತು ವಿ ಮುರಳೀಧರನ್ ಅವರು ಆ್ಯಂಟನಿ ಅವರನ್ನು ಬಿಜೆಪಿಗೆ ಬರಮಾಡಿಕೊಂಡರು.
”ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬಲವಾದ ದೃಷ್ಟಿಕೋನವಿದೆ, ನಾನು ರಾಷ್ಟ್ರೀಯ ಏಕೀಕರಣಕ್ಕೆ ಕೊಡುಗೆ ನೀಡಲು ಬಯಸುತ್ತೇನೆ. ಕಾಂಗ್ರೆಸ್‌ನಲ್ಲಿರುವ ಕೆಲವರು ಪರಿವಾರಕ್ಕಾಗಿ ಕೆಲಸ ಮಾಡುತ್ತಾರೆ, ನಾನು ದೇಶಕ್ಕಾಗಿ ಕೆಲಸ ಮಾಡುತ್ತೇನೆ ಎಂದು ಬಿಜೆಪಿಗೆ ಸೇರ್ಪಡೆಯಾದ ನಂತರ ಅನಿಲ್ ಆ್ಯಂಟನಿ ಹೇಳಿದ್ದಾರೆ.
ಕೇರಳದ ಕಾಂಗ್ರೆಸ್ ನಾಯಕರಾಗಿದ್ದ ಅನಿಲ್ ಆ್ಯಂಟನಿ ಅವರು 2002 ರ ಗುಜರಾತ್ ಗಲಭೆಗಳು ಮತ್ತು ಪ್ರಧಾನಿ ನರೇಂದ್ರ ಮೋದಿಯ ಕುರಿತು ಬಿಬಿಸಿಯ ಸಾಕ್ಷ್ಯಚಿತ್ರದ ವಿವಾದದ ನಂತರ ಜನವರಿಯಲ್ಲಿ ಪಕ್ಷವನ್ನು ತೊರೆದಿದ್ದರು.
ಅನಿಲ್ ಆ್ಯಂಟನಿ ಅವರು ಪಕ್ಷವನ್ನು ಬಿಡುವ ಮೊದಲು ಕೇರಳದಲ್ಲಿ ಕಾಂಗ್ರೆಸ್‌ನ ಸಾಮಾಜಿಕ ಮಾಧ್ಯಮ ಸೆಲ್ ನಿರ್ವಹಿಸುತ್ತಿದ್ದರು. ಪಕ್ಷವನ್ನು ತೊರೆಯುವ ಮೊದಲು ಅವರು BBC ಸಾಕ್ಷ್ಯಚಿತ್ರವನ್ನು”ಭಾರತದ ವಿರುದ್ಧ ಪೂರ್ವಾಗ್ರಹ” ಎಂದು ಕರೆದಿದ್ದರು.