Advertisement

ಪ್ರಾಣಿ ದಾಳಿ: ಮೃತರ ಕುಟುಂಬಕ್ಕೆ 7.5 ಲಕ್ಷ ರೂ.

10:37 PM Jan 11, 2020 | Lakshmi GovindaRaj |

ಬೆಂಗಳೂರು: ಮಾನವ ಮತ್ತು ಪ್ರಾಣಿ ಸಂಘರ್ಷದಲ್ಲಿ ಮೃತಪಟ್ಟವರ ಕುಟುಂಬಕ್ಕೆ ನೀಡುತ್ತಿರುವ ಪರಿಹಾರ ಧನವನ್ನು ಐದು ಲಕ್ಷ ರೂ.ಗಳಿಂದ ಏಳೂವರೆ ಲಕ್ಷ ರೂ.ಗೆ ಹೆಚ್ಚಿಸಿ ಸರ್ಕಾರ ಆದೇಶ ಹೊರಡಿಸಿದೆ. ಪ್ರಾಣಿ ದಾಳಿ ಸಂಖ್ಯೆ ಹೆಚ್ಚಳವಾಗುತ್ತಿದ್ದು, ದಾಳಿಯಿಂದ ಸಾವಿಗೀಡಾದವರ ಪರಿಹಾರ ಧನವನ್ನು ದ್ವಿಗುಣಗೊಳಿಸಬೇಕು ಎಂದು ಹಲವು ದಿನಗಳಿಂದ ಒತ್ತಾಯ ಕೇಳಿಬರುತ್ತಿತ್ತು.

Advertisement

ಇತ್ತೀಚೆಗೆ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ 11ನೇ ರಾಜ್ಯ ವನ್ಯಜೀವಿ ಮಂಡಳಿ ಸಭೆಯಲ್ಲಿ ಸದ್ಯ ಕೊಡುತ್ತಿರುವ 5 ಲಕ್ಷ ರೂ.ಪರಿಹಾರ ಧನ 10 ಲಕ್ಷ ರೂ.ಗೆ ಏರಿಕೆ ಮಾಡುವಂತೆ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳು ಮನವಿ ಮಾಡಿದ್ದರು. ಇದಕ್ಕೆ ಸ್ಪಂದಿಸಿರುವ ಸರ್ಕಾರವು ಪರಿಹಾರವನ್ನು 7.5 ಲಕ್ಷ ರೂ.ಗೆ ಹೆಚ್ಚಿಸಿದೆ. ಇನ್ನು ಕಳೆದ 4 ವರ್ಷಗಳಲ್ಲಿ ಮೃತಪಟ್ಟವರ ಸಂಖ್ಯೆ 153 ಮಂದಿ ಸಾವಿಗೀಡಾಗಿದ್ದಾರೆ ಎಂದು ಅರಣ್ಯ ಇಲಾಖೆ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next