Advertisement

ರಾಮಕೃಷ್ಣ ಭಟ್, ಶೇಖ್ ಆದಂ ಸಾಹೇಬ್ ರಿಗೆ ರಾಜ್ಯ ಮಟ್ಟದ ಅನಿತಾ ಕೌಲ್ ಉತ್ತಮ ಶಿಕ್ಷಕ ಪ್ರಶಸ್ತಿ

08:21 AM Jan 18, 2023 | Team Udayavani |

ಬೆಳ್ತಂಗಡಿ: ರಾಜ್ಯ ಮಟ್ಟದ ಅನಿತಾ ಕೌಲ್ ಉತ್ತಮ ಶಿಕ್ಷಕ ಪ್ರಶಸ್ತಿಗೆ ರಾಮಕೃಷ್ಣ ಭಟ್ ಚೊಕ್ಕಾಡಿ ಹಾಗೂ ಶೇಖ್ ಆದಂ ಸಾಹೇಬ್ ನೆಲ್ಯಾಡಿ ಅವರು ಆಯ್ಕೆಯಾಗಿದ್ದಾರೆ. ಇದೇ ಫೆ.22 ರಂದು ಬೆಂಗಳೂರಿನಲ್ಲಿ ಪ್ರಶಸ್ತಿ ಸಮಾರಂಭ ನಡೆಯಲಿದೆ.

Advertisement

ರಾಮಕೃಷ್ಣ ಭಟ್ ಚೊಕ್ಕಾಡಿ:

ಬೆಳ್ತಂಗಡಿ ತಾಲೂಕಿನ ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯಲ್ಲಿ ಮುಖ್ಯೋಪಾಧ್ಯಾಯರಾಗಿ ಕರ್ತವ್ಯ ಸಲ್ಲಿಸುತ್ತಿರುವ ಇವರು, ಕರ್ನಾಟಕ ರಾಜ್ಯ ಜ್ಞಾನ ವಿಜ್ಞಾನ ಸಮಿತಿಯವರು ಕೊಡಮಾಡುವ 2022ನೇ ಸಾಲಿನ, ರಾಜ್ಯ ಮಟ್ಟದ, ಅನಿತಾ ಕೌಲ್ ಉತ್ತಮ ಶಿಕ್ಷಕ ಉತ್ತಮ ಶಿಕ್ಷಕ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಸಾಹಿತಿ, ಬರಹಗಾರ, ಉತ್ತಮ ಸಂಘಟಕರೂ ಆಗಿರುವ ಇವರು ಬೋಧನೆಯೊಂದಿಗೆ ತನ್ನ ಶಾಲೆಯಲ್ಲಿ ಕಲಾ ಗ್ಯಾಲರಿಯೊಂದಿಗೆ, ಜಲ ಮರುಪೂರಣದಂತಹ ವಿಶೇಷ ಪ್ರಯೋಗಗಳನ್ನು ನಡೆಸಿದವರು.

ಶೇಖ್ ಆದಂ ಸಾಹೇಬ್ ನೆಲ್ಯಾಡಿ :

Advertisement

ಶಿಕ್ಷಕ, ಸಂಘಟಕ, ಕ್ರಿಯಾಶೀಲ ಬೋಧಕರಾಗಿರುವ ಶೇಖ್ ಆದಂ ಸಾಹೇಬ್ ರವರು 2022ನೇ ಸಾಲಿನ, ಕರ್ನಾಟಕ ರಾಜ್ಯ ಜ್ಞಾನ ವಿಜ್ಞಾನ ಸಮಿತಿಯವರು ಕೊಡಮಾಡುವ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಕಡಬ ತಾಲೂಕಿನ ನೆಲ್ಯಾಡಿಯ ಕೌಕ್ರಾಡಿ ಗ್ರಾಮದವರಾದ  ಇವರು ಪ್ರಸ್ತುತ ಬಂಟ್ವಾಳ ತಾಲೂಕಿನ ಕಾವಳಪಡೂರು ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಮುಖ್ಯೋಪಾಧ್ಯಾಯರಾಗಿ ಕರ್ತವ್ಯ ಸಲ್ಲಿಸುತ್ತಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next