ಹುಬ್ಬಳ್ಳಿ: ಅಂಜಲಿ ಅಂಬಿಗೇರ ಹತ್ಯೆ ಹಾಗೂ ರಾಜ್ಯದಲ್ಲಿ ಕಾನೂನು ವ್ಯವಸ್ಥೆ ಹದಗೆಟ್ಟಿರುವುದನ್ನು ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಗುರುವಾರ ಇಲ್ಲಿನ ಕಿತ್ತೂರು ರಾಣಿ ಚನ್ನಮ್ಮ ವೃತ್ತದಲ್ಲಿ ಪ್ರತಿಭಟನೆಗೆ ನಡೆಸಿ ತಹಸಿಲ್ದಾರರಿಗೆ ಮನವಿ ಸಲ್ಲಿಸಿದರು
ನೇಹಾ ಹಿರೇಮಠ ಅವರ ಹತ್ಯೆ ಮಾಸುವ ಮುನ್ನವೇ ನಗರದಲ್ಲಿ ಮತ್ತೊಬ್ಬ ಯುವತಿ ಆಂಜಲಿ ಅಂಬಿಗೇರ ಕೊಲೆಯಾಗಿರುವುದು ದುರಂತದ ಸಂಗತಿಯಾಗಿದೆ. ನೇಹಾ ಹತ್ಯೆಯಾದ ಸಂದರ್ಭದಲ್ಲಿ ಪೊಲೀಸ್ ಇಲಾಖೆ ಕಠಿಣ ಕ್ರಮ ಕೈಗೊಂಡಿದ್ದರೆ, ಈ ಘಟನೆ ನಡೆಯುತ್ತಿರಲಿಲ್ಲ ಎಂದರು.
ರಾಜ್ಯದಲ್ಲಿ ಪದೇ ಪದೇ ಹತ್ಯೆಗಳು, ಹಲ್ಲೆ ಪ್ರಕರಣಗಳು ನಡೆಯುತ್ತಿರುವುದನ್ನು ನೋಡಿದರೆ ರಾಜ್ಯದಲ್ಲಿ ಸಂಪೂರ್ಣವಾಗಿ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವುದು ಸ್ಪಷ್ಟವಾಗಿ ಕಂಡುಬರುತ್ತದೆ. ಮುಖ್ಯಮಂತ್ರಿ, ಗೃಹ ಸಚಿವರು ಹಾಗೂ ಪೊಲೀಸ್ ಇಲಾಖೆ ರಾಜ್ಯದಲ್ಲಿ ಆಡಳಿತ ಮಾಡಲು ಸಂಪೂರ್ಣವಾಗಿ ವಿಫಲವಾರಾಗಿದ್ದು, ಈ ರೀತಿಯ ಘಟನೆಗಳಿಂದ ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ರಕ್ಷಣೆ ಇಲ್ಲದಂತಾಗಿದೆ. ಘಟನೆಯ ಕುರಿತು ಆರೋಪಿಯಿಂದ ಬೆದರಿಕೆ ಬಂದಂತಹ ಸಂದರ್ಭದಲ್ಲಿ ಪೊಲೀಸರ ಸಹಾಯ ಕೇಳಿದರೂ ಸಹಿತ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಯ ವಹಿಸಿದ್ದರಿಂದ ಹತ್ಯೆಯಾಗಿದೆ ಎಂದು ಆರೋಪಿಸಿದರು.
ಆರೋಪಿಯನ್ನೂ ಬಂದಿಸಿ ಕಠಿಣ ಶಿಕ್ಷೆ ನೀಡುವಂತೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ರಾಜ್ಯ ಸರ್ಕಾರವನ್ನು ಆಗ್ರಹಿಸಿದೆ.
ಸ್ಥಳಕ್ಕೆ ಆಗಮಿಸಿದ ಶಹರ ತಹಶೀಲ್ದಾರ ಕಲಗೌಡ ಪಾಟೀಲ ಮನವಿ ಸ್ವೀಕರಿಸಿದರು. ಪ್ರತಿಭಟನೆಯಲ್ಲಿ ಎಬಿವಿಪಿ ಪದಾಧಿಕಾರಿಗಳು ಹಾಗೂ ವಿದ್ಯಾರ್ಥಿಗಳು ಇದ್ದರು