Advertisement

Anjali Ambigera Case; ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ

02:58 PM May 16, 2024 | Team Udayavani |

ಹುಬ್ಬಳ್ಳಿ: ಅಂಜಲಿ ಅಂಬಿಗೇರ ಹತ್ಯೆ ಆರೋಪಿ ಬಂಧಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿದ್ದ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು.

Advertisement

ಇಲ್ಲಿನ ವೀರಪುರ ಓಣಿಯ ಶ್ರೀ ಕರಿಯಮ್ಮ ದೇವಸ್ಥಾನದಿಂದ ಶಹರ ಠಾಣೆಯವರೆಗೆ ಪ್ರತಿಭಟನಾ ಮೆರವಣಿಗೆ ಮೂಲಕ ಆಗಮಿಸಿದರು. ರಾಜ್ಯ ಸರ್ಕಾರ, ಮುಖ್ಯ ಮಂತ್ರಿ, ಗೃಹಸಚಿವರ ವಿರುದ್ಧ ಘೋಷಣೆ ಕೂಗಿದರು.

ಠಾಣೆಗೆ ಮುತ್ತಿಗೆ ಹಾಕಲು ಪ್ರಯತ್ನಿಸುತ್ತಿದ್ದಂತೆ ಕಾರ್ಯಕರ್ತರನ್ನು ವಶಕ್ಕೆ ಪಡೆಯಲಾಯಿತು. ಇಲ್ಲಿಂದ ಹೊಸ ಸಿಎಆರ್ ಮೈದಾನಕ್ಕೆ ಕರೆದುಕೊಂಡು ಹೋಗಲಾಯಿತು.

ಶಾಸಕ ಮಹೇಶ ಟೆಂಗಿನಕಾಯಿ ಮಾತನಾಡಿ, ಇಂತಹ ಪ್ರಕರಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯ ಸರಕಾರ ಸಂಪೂರ್ಣ ವಿಫಲವಾಗಿದೆ. ನೇಹಾ ಪ್ರಕರಣದಲ್ಲಿ ಕೊಲೆಗಾರನ್ನು ಎನ್ ಕೌಂಟರ್ ಮಾಡಿದ್ದರೆ ಈಗ ಘಟನೆ ನಡೆಯುತ್ತಿರಲಿಲ್ಲ. ಕೊಲೆಯಾದ ಅಂಜಲಿ ಹಾಗೂ ಅವರ ತಾಯಿ ಬೆಂಡಿಗೇರಿ ಪೊಲೀಸ್ ಠಾಣೆಗೆ ಹೋದರೆ ಪೊಲೀಸರು ಸ್ಪಂದಿಸಿದ ಕಾರಣ ಈ ಘಟನೆ ನಡೆದಿದೆ. ಪೊಲೀಸ್ ವ್ಯವಸ್ಥೆ ಸರಕಾರದ ಕೈಗೊಂಬೆಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next