Advertisement
ಕೊಪ್ಪಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ನಮ್ಮೆಲ್ಲರ ಆರಾಧ್ಯ ದೈವ ಅಂಜನಾದ್ರಿಯ ಹನುಮಂತನ ದರ್ಶನಕ್ಕೆ ಆಗಮಿಸಿದ್ದೇವೆ. ಅಂಜನಾದ್ರಿಯ ಸಮಗ್ರ ಅಭಿವೃದ್ಧಿಗೆ ಈಗಾಗಲೆ ಬಜೆಟ್ ನಲ್ಲಿ 100 ಕೋಟಿ ರೂಪಾಯಿ ಅನುದಾನ ಘೋಷಣೆ ಮಾಡಿದ್ದೇನೆ. ಅಂಜನಾದ್ರಿಗೆ ಪ್ರತಿವರ್ಷವೂ ಲಕ್ಷಾಂತರ ಭಕ್ತರು ಆಗಮಿಸುತ್ತಿದ್ದಾರೆ. ಆಗಮಿಸುವ ಭಕ್ತರಿಗೆ ಮೂಲ ಸೌಕರ್ಯ ಕಲ್ಪಿಸುವುದು ನಮ್ಮಕರ್ತವ್ಯ. ಬರುವ ದಿನಗಳಲ್ಲಿ ಯಾತ್ರಿಗಳು ಆಗಮಿಸುವ ಸಂಖ್ಯೆ ಹೆಚ್ಚಳವಾಗಲಿದೆ. ಹೀಗಾಗಿ ಅಂಜನಾದ್ರಿ ಬೆಟ್ಟದ ಮೇಲೂ ಮತ್ತು ಕೆಳಗೂ ಅಭಿವೃದ್ಧಿ ಆಗಬೇಕಾದ ಅಗತ್ಯವಿದೆ ಎಂದರು.
ಪುರಾತತ್ವ ಇಲಾಖೆ ವ್ಯಾಪ್ತಿಯ ಪ್ರದೇಶಗಳನ್ನು ಹೊರತುಪಡಿಸಿ ಉಳಿದೆಲ್ಲವುಗಳನ್ನು ಅಭಿವೃದ್ಧಿ ಪಡಿಸಲಾಗುವುದು. ಇದರ ಜತೆಗೆ ಅಂತಾರಾಷ್ಟ್ರೀಯ ಪ್ರವಾಸಿಗರಿಗೂ ವ್ಯವಸ್ಥೆ ಕಲ್ಪಿಸಲಾಗುವುದು. ಈ ಭಾಗದ ಐತಿಹಾಸಿಕ ಪ್ರವಾಸಿತಾಣಗಳ ಅಭಿವೃದ್ಧಿಗೆ ಒತ್ತುಕೊಡಲಿದ್ದೇವೆ ಎಂದರು.
Related Articles
Advertisement
ಹನುಮ ಜನ್ಮಭೂಮಿ ಅಂಜನಾದ್ರಿ ಎನ್ನುವ ನಮ್ಮ ನಂಬಿಕೆಯೆ ಘೋಷಣೆಯಾಗಿದೆ. ಕರ್ನಾಟಕ, ಅಂಧ್ರ ಅಥವಾ ಬೇರೆ ರಾಜ್ಯ ಎಂಬ ಮಾತೇ ಇಲ್ಲ. ಇಡೀ ಭಾರತಕ್ಕೆ ಗೊತ್ತಿದೆ ಅಂಜನಾದ್ರಿಯೇ ಹನುಮನ ಜನ್ಮಸ್ಥಳ ಎಂದು. ಇದನ್ನು ಸಾವಿರ ಬಾರಿ ಸಾರಿ ಸಾರಿ ಹೇಳುತ್ತೇನೆ. ಅಂಜನಾದ್ರಿಯ ಅಭಿವೃದ್ಧಿಗೆ ಬೇಕಾದ ಜಮೀನು ಸ್ವಾಧೀನಕ್ಕೆ ಕ್ರಮ ಕೈಗೊಳ್ಳಲಾಗಿದೆ. ಈ ಬಗ್ಗೆ ಬೆಂಗಳೂರಿನಲ್ಲಿ ಈಗಾಗಲೆ ಒಂದು ಸಭೆ ಮಾಡಿರುವೆ ಎಂದರು.
ಆಂಜನೇಯ ಮೂರ್ತಿಗೆ ಸಿಎಂ ಸಾಷ್ಟಾಂಗ ನಮಸ್ಕಾರ
ಬೆಟ್ಟದ ಕೆಳಗೆ ಹನುಮಂತನ ಮೂರ್ತಿಗೆ ವಿಶೇಷ ಪೂಜೆ ಸಲ್ಲಿಸಿದರು. ಹನುಮಾನ್ ಚಾಲೀಸಾ ಪಠಣ ಮಾಡಿದರು. ವಿಶೇಷ ಪೂಜೆ ಸಲ್ಲಿಸಿದ ಬಳಿಕ ಭಕ್ತಿಯಿಂದ ಆಂಜಿನೇಯನ ಮೂರ್ತಿಗೆ ಸಾಷ್ಟಾಂಗ ನಮಸ್ಕಾರ ಹಾಕಿ ಗಮನ ಸೆಳೆದರು. ಅಂಜನಾದ್ರಿ ಆಡಳಿತ ಮಂಡಳಿಯಿಂದ ಸಿಎಂಗೆ ಸನ್ಮಾನ ಮಾಡಿ ಆಂಜನೇಯನ ಭಾವಚಿತ್ರ ಕಾಣಿಕೆಯಾಗಿ ನೀಡಿದರು. ಗಂಗಾವತಿ ಶಾಸಕ ಪರಣ್ಣ ಮುನವಳ್ಳಿ ಅವರು ಸಿಎಂ ಬೊಮ್ಮಾಯಿ ಅವರಿಗೆ ಆಂಜನೇಯನ ಬೆಳ್ಳಿ ಮೂರ್ತಿ ಕಾಣಿಕೆಯಾಗಿ ನೀಡಿದರು.
Koo Appಮುಖ್ಯಮಂತ್ರಿ @bsbommai ಅವರು ಇಂದು ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಅಂಜನಾದ್ರಿ ಬೆಟ್ಟಕ್ಕೆ ಭೇಟಿ ನೀಡಿ 100 ಕೋಟಿ ರೂ. ವೆಚ್ಚದಲ್ಲಿ ಅಂಜನಾದ್ರಿ ಬೆಟ್ಟದ ಸಮಗ್ರ ಅಭಿವೃದ್ಧಿ ಕುರಿತಂತೆ ಅಧಿಕಾರಿ ಹಾಗೂ ಜನಪ್ರತಿನಿಧಿಗಳ ಮಹತ್ವದ ಸಭೆ ನಡೆಸಿದರು. ಸಭೆಯಲ್ಲಿ ಸಚಿವರಾದ ಹಾಲಪ್ಪ ಆಚಾರ್, ಬೈರತಿ ಬಸವರಾಜ್, ಡಾ. ಕೆ ಸುಧಾಕರ್, ಶಶಿಕಲಾ ಜೊಲ್ಲೆ, ಆನಂದ ಸಿಂಗ್, ಸಂಸದ ಕರಡಿ ಸಂಗಣ್ಣ, ಶಾಸಕರಾದ ಪರಣ್ಣ ಮುನವಳ್ಳಿ, ಬಸವರಾಜ ದಡೆಸುಗೂರ, ಕೊಪ್ಪಳ ಜಿಲ್ಲಾಧಿಕಾರಿ ಸೇರಿದಂತೆ ಇತರರು ಉಪಸ್ಥಿತರಿದ್ದರು. – CM of Karnataka (@CMOKarnataka) 1 Aug 2022