Advertisement

ಊಹಾಪೋಹಗಳಿಗೆ ಕಿವಿಗೊಡಬೇಡಿ: ಡಿಸಿ ಮನವಿ

04:24 PM Jun 27, 2020 | Naveen |

ಅಂಕೋಲಾ: ತಾಲೂಕಿನಲ್ಲಿ ಶುಕ್ರವಾರ ಕೋವಿಡ್ ಪಾಸಿಟಿವ್‌ ಬಂದ ವ್ಯಕ್ತಿ ಸಾವಿನ ಸುದ್ದಿ ಎಲ್ಲಡೆ ಹರಿದಾಡುತ್ತಿರುವುದು ಸುಳ್ಳು ಸುದ್ದಿ ಆತನನ್ನು ಕಾರವಾರದ ಕೋವಿಡ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸಾರ್ವಜನಿಕರು ಯಾವುದೆ ಗಾಳಿ ಸುದ್ದಿಗಳಿಗೆ ತಲೆ ಕೆಡಿಸಿಕೊಳ್ಳಬಾರದು ಎಂದು ಜಿಲ್ಲಾಧಿಕಾರಿ ಡಾ| ಹರೀಶಕುಮಾರ ಹೇಳಿದರು.

Advertisement

ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕೋವಿಡ್ ಸಂಬಂಧಿಸಿದಂತೆ ಗಾಳಿ ಸುದ್ದಿಗಳು ಹರಿದಾಡುತ್ತಿವೆ. ಇದರಿಂದ ಜನ ಸಾಮಾನ್ಯರಿಗೆ ಗೊಂದಲವಾಗುತ್ತಿದೆ. ಇಂತಹ ಗಾಳಿ ಸುದ್ದಿಗೆ ಕಿವಿಗೊಡಬೇಡಿ. ಸ್ಥಳೀಯ ಅಧಿಕಾರಿಗಳನ್ನು ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದಾಗಿದೆ ಎಂದರು.

ಈತ ಮಂಗಳೂರಿನ ಕಂಟೇನ್ಮೆಂಟ್‌ ಝೋನ್‌ ಪ್ರದೇಶಕ್ಕೆ ಹೋಗಿ ಬಂದಿದ್ದ. ಅಲ್ಲಿಂದ ಬಂದ ಬಳಿಕ ಈತನಲ್ಲಿ ಜ್ವರ ಕಾಣಿಸಿದ್ದು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾನೆ. ಅಲ್ಲಿ ಕೋವಿಡ್ ಪಾಸಿಟಿವ್‌ ಇರುವುದು ತಿಳಿದು ಬಂದಿದೆ. ತಕ್ಷಣ ಅವನಿಗೆ ಕಾರವಾರ ವೈದ್ಯಕೀಯ ಮಹಾವಿದ್ಯಾಲಯದ ಕೋವಿಡ ಘಟಕಕ್ಕೆ ಸಾಗಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈಗಾಗಲೇ ಈ ವ್ಯಕ್ತಿಯ ಟ್ರಾವೆಲ್‌ ಹಿಸ್ಟ್ರಿ ಕಲೆ ಹಾಕುಲಾಗುತ್ತಿದೆ. ಅವರ ಗ್ರಾಮದಲ್ಲಿಯು ಮುನ್ನೆಚ್ಚರಿಕೆ ಕ್ರಮ ಜರುಗಿಸಲಾಗಿದೆ. ಎಂದರು.

ಕುಮಟಾ ಉಪವಿಭಾಗಾಧಿಕಾರಿ ಅಜೀತ ರೈ ನೇತೃತ್ವದಲ್ಲಿ ತಾಲೂಕು ದಂಡಾಧಿಕಾರಿ ಉದಯ ಕುಂಬಾರ, ತಾ.ಪಂ. ಇಒ ಪಿ.ವೈ. ಸಾವಂತ, ಸಿಪಿಐ ಕೃಷ್ಣಾನಂದ ನಾಯಕ, ಪಿಎಸ್‌ಐ ಈ.ಸಿ. ಸಂಪತ್‌, ತಾಲೂಕು ಆರೋಗ್ಯಾಧಿಕಾರಿ ಡಾ| ಅರ್ಚನಾ ನಾಯ್ಕ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next