Advertisement

ಓವರ್ ಟೇಕ್ ಮಾಡುವ ಭರದಲ್ಲಿ ಕಾರಿದೆ ಡಿಕ್ಕಿ ಹೊಡೆದ ಲಾರಿ : ಓರ್ವ ಸಾವು, ಮೂವರು ಗಂಭೀರ

07:37 PM Aug 06, 2021 | Team Udayavani |

ಅಂಕೋಲಾ : ಕಾರು ಮತ್ತು ಲಾರಿ ನಡುವೆ ನಡೆದ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ಓರ್ವ ಪ್ರಯಾಣಿಕ ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಮೂವರು ಗಂಭೀರ ಗಾಯಗೊಂಡ ಘಟನೆ ರಾ.ಹೆ. 63 ಹೆಬ್ಬುಳ ಬಳಿ ಶುಕ್ರವಾರ ನಡೆದಿದೆ.

Advertisement

ಗದಗ ಜಿಲ್ಲೆಯ ಪಂಚಾಕ್ಷರಿನಗರದ ವಸಂತ ದಾಕಪ್ಪ ಅಕ್ಕಿ(73) ಮೃತ ದುರ್ದೈವಿ, ಕಾರಿನಲ್ಲಿದ್ದ ಉಳಿದ ಮೂವರಿಗೆ ಗಂಭಿರ ಗಾಯಗಳಾಗಿದ್ದು  ಅವರಿಗೆ ಅಂಕೋಲಾ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಲಾರಿ ಚಾಲಕನ ಅಜಾಗರೂಕತೆಯ ಚಾಲನೆಯೇ ಈ ಅವಘಡಕ್ಕೆ ಕಾರಣ ಎನ್ನಲಾಗಿದೆ. ಲಾರಿ ಅಂಕೋಲಾದಿಂದ ಹುಬ್ಬಳ್ಳಿ ಮಾರ್ಗವಾಗಿ ಸಂಚರಿಸುವ ವೇಳೆ ಇನ್ನೊಂದು ವಾಹನವನ್ನು ಹಿಂದಿಕ್ಕುವ ಬರದಲ್ಲಿ ಎದುರಿನಿಂದ ಗದಗದಿಂದ ಕಾರವಾರಕ್ಕೆ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ.

ಲಾರಿ ಚಾಲಕನ ವಿರುದ್ಧ ಅಂಕೋಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ :ಅಂಕೋಲಾ : ಲಾರಿ, ಕ್ಯಾಂಟರ್ ನಡುವೆ ಭೀಕರ ಅಪಘಾತ : ಓರ್ವ ಸಾವು, ಇಬ್ಬರಿಗೆ ಗಾಯ

Advertisement
Advertisement

Udayavani is now on Telegram. Click here to join our channel and stay updated with the latest news.

Next