Advertisement

ಅಂಕೋಲಾ : ಲಾರಿ, ಕ್ಯಾಂಟರ್ ನಡುವೆ ಭೀಕರ ಅಪಘಾತ, ಓರ್ವ ಸಾವು

07:19 PM Aug 06, 2021 | Team Udayavani |

ಅಂಕೋಲಾ : ಕ್ಯಾಂಟರ್ ಮತ್ತು ಲಾರಿ ನಡುವೆ ನಡೆದ ಭೀಕರ ಅಪಘಾತದಲ್ಲಿ ಕ್ಯಾಂಟರ್‌ನಲ್ಲಿದ್ದ ಕ್ಲೀನರ್ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ರಾ.ಹೆ 63 ಸರಳೇಬೈಲ್ ಬಳಿ ಶುಕ್ರವಾರ ನಡೆದಿದೆ.

Advertisement

ಧಾರವಾಡ ಜಿಲ್ಲೆಯ ಕಲಘಟಗಿ ನಿವಾಸಿ ಬಸವರಾಜ ನಾಗಪ್ಪ ಉಮ್ಮಚಗಿ (19) ಮೃತ ದುರ್ದೈವಿ, ಕ್ಯಾಂಟರ್ ಮತ್ತು ಲಾರಿ ಚಾಲಕರಿಗೆ ಚಿಕ್ಕಪುಟ್ಟ ಗಾಯಗಳಾಗಿದ್ದುಅವರಿಗೆ ಅಂಕೋಲಾ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.

ತೆಲಂಗಾಣದಿಂದ ಕೇರಳ ಮಾರ್ಗವಾಗಿ ಸಂಚರಿಸುತ್ತಿದ್ದ ಲಾರಿ, ಮಂಗಳೂರಿನಿಂದ ಹುಬ್ಬಳ್ಳಿಗೆ ಹೋಗುತ್ತಿದ್ದ ಕ್ಯಾಂಟರ್‌ಗೆ ಡಿಕ್ಕಿ ಹೊಡೆದ ಪರಿಣಾಮ ದುರ್ಘಟನೆ ಸಂಭವಿಸಿದೆ. ಅಪಘಾತದ ರಭಸಕ್ಕೆ ಎರಡೂ ವಾಹನಗಳು ಜಖಂಗೊಂಡಿವೆ

ಈ ಕುರಿತು ಅಂಕೋಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ :ಕಡಿಮೆ ಅವಧಿಯಲ್ಲಿ 3 ಲಕ್ಷ ಕಾರುಗಳನ್ನು ಮಾರಾಟ ಮಾಡಿದ ಕಿಯಾ

Advertisement
Advertisement

Udayavani is now on Telegram. Click here to join our channel and stay updated with the latest news.

Next