ಅಂಕೋಲಾ: ಶಿರೂರು ಗುಡ್ಡ ಕುಸಿತ ಪ್ರದೇಶದಲ್ಲಿ ಬೆಂಜ್ ಲಾರಿ ಮತ್ತು ಕೇರಳದ ಕೋಝಿಕ್ಕೋಡ್ ನ ಚಾಲಕ ಅರ್ಜುನ್ ಪತ್ತೆಗಾಗಿ ಬಾಂಬ್ ನಿಷ್ಕ್ರಿಯ ಮೆಟಲ್ ಡಿಟೆಕ್ಟರ್ ಮೂಲಕ ಪತ್ತೆ ಕಾರ್ಯ ಭರದಿಂದ ನಡೆದಿದೆ.
ಬೆಂಜ್ ಲಾರಿ ಮಾಲಕರಿಂದ ಮಂದಗತಿಯಲ್ಲಿ ನಡೆಯುತ್ತಿದ್ದ ರಕ್ಷಣಾ ಕಾರ್ಯದ ಕುರಿತು ಅಸಮಾದಾನ ವ್ಯಕ್ತಪಡಿಸಿ ಕೇರಳ ಸರಕಾರದ ಸಹಾಯ ಹಸ್ತ ಚಾಚಿ ಮಣ್ಣಿನಡಿ ಸಿಲುಕಿರ ಅರ್ಜುನ ಅವರ ರಕ್ಷಣೆ ಮಾಡುವಂತೆ ಮನವಿ ಮಾಡಿದ ಹಿನ್ನೆಲೆ ಕೇರಳ ಸರಕಾರ ಕರ್ನಾಟಕ ಸರಕಾರ ಜೊತೆ ಚರ್ಚಿಸಿ ಜು.20ರ ಶನಿವಾರ ಕಾರ್ಯಾಚರಣೆ ಚುರುಕುಗೊಳಿಸಿದ್ದಾರೆ.
ಮೆಟಲ್ ಡಿಟೆಕ್ಟರ್ ಮೂಲಕ ಲಾರಿ ಮತ್ತು ಚಾಲಕ ಅರ್ಜುನ ಪತ್ತೆ ಕಾರ್ಯ ಭರದಿಂದ ಸಾಗುತ್ತಿದೆ.
ನೇವಿ ಅಧಿಕಾರಿಗಳು, ಎನ್.ಡಿ.ಆರ್.ಎಫ್ ಮತ್ತು ಎಸ್.ಡಿ.ಆರ್.ಎಫ್, ಅಗ್ನಿಶಾಮಕ ಇಲಾಖೆಯ ಸಿಬ್ಬಂದಿಗಳು ಸಮೀಪದ ನದಿಯಲ್ಲಿ ಕೂಡಾ ತಪಾಸಣೆ ನಡೆಸಿದ್ದಾರೆ. ನೆಲದಲ್ಲಿ ಶೋಧ ಕಾರ್ಯ ನಡೆಸಲು ರಾಡಾರ್ ತರಿಸಲಾಗಿದೆ.
ಉಸ್ತುವಾರಿ ಸಚಿವ ಮಂಕಾಳ ವೈದ್ಯ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಾರಾಯಣ್ ಇದ್ದರು.