Advertisement
ಸಮಸ್ಯೆಗಳು ಪ್ರತಿಯೊಬ್ಬರಿಗೂ ಇರುತ್ತವೆ. ಆದರೆ, ಆ ಸಮಸ್ಯೆಗಳನ್ನು ಪರಿಹರಿಸುವ ವಿಧಾನವು ಸರಿಯಾಗಿರಬೇಕು ಎಂದು ಹಜಾರೆ ನುಡಿದಿದ್ದಾರೆ. ಸ್ಫೋಟ, ಗುಂಡಿನ ದಾಳಿ ಮತ್ತು ಅಮಾಯಕ ಜನರ ಪ್ರಾಣವನ್ನು ಬಲಿ ತೆಗೆದುಕೊಳ್ಳುವುದರಿಂದ ಸಮಸ್ಯೆಗಳು ಬಗೆಹರಿಯಲ್ಲ. ಪ್ರತಿಯೊಂದು ಸಮಸ್ಯೆಗೂ ಬಂದೂಕು ಪರಿಹಾರವಲ್ಲ. ಇದರಿಂದ ಸಮಸ್ಯೆ ಇನ್ನಷ್ಟು ಜಟಿಲವಾಗುತ್ತದೆ ಎಂದರು.
ಇಂತಹ ಸಮಸ್ಯೆಗಳನ್ನು ಮಾತುಕತೆಯ ಮೂಲಕ ಪರಿಹರಿಸಿಕೊಳ್ಳಬಹುದಾಗಿದೆ. ಮಾತುಕತೆಗೆ ಕತ್ತಿ ಕೂಡ ಬಾಗುತ್ತದೆ ಎಂಬುದಕ್ಕೆ ಇತಿಹಾಸ ಸಾಕ್ಷಿಯಾಗಿದೆ. ಈ ಪರಂಪರೆಯನ್ನು ನಾವು ಮರೆಯಬಾರದು. ನಾವು ಸಮಸ್ಯೆಯನ್ನು ಮಾನವೀಯತೆಯ ದೃಷ್ಟಿಯಿಂದ ನೋಡಬೇಕು ಎಂದು ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ಅಭಿಪ್ರಾಯಪಟ್ಟಿದ್ದಾರೆ.