Advertisement

ರಾಜಕೀಯ ಮೈಲೇಜ್ ತೆಗೆದುಕೊಳ್ಳಲು ಅಣ್ಣಾಮಲೈ ಸತ್ಯಾಗ್ರಹ ಮಾಡಿದ್ದಾರೆ: ಎಸ್.ಟಿ‌.ಸೋಮಶೇಖರ್

02:36 PM Aug 06, 2021 | Team Udayavani |

ಚಾಮರಾಜನಗರ: ಮೇಕೆದಾಟು ಯೋಜನೆ ವಿರೋಧಿಸಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈಗೆ ಈಗಾಗಲೇ ನಮ್ಮ ಸಿಎಂ ಖಡಕ್ ಉತ್ತರ ನೀಡಿದ್ದಾರೆ. ರಾಜಕೀಯ ಮೈಲೇಜ್ ತೆಗೆದುಕೊಳ್ಳಲು ಅಣ್ಣಾಮಲೈ ಸತ್ಯಾಗ್ರಹ ಮಾಡಿದ್ದಾರೆ ಎಂದು ಸಚಿವ ಎಸ್.ಟಿ‌.ಸೋಮಶೇಖರ್ ಹೇಳಿದರು.

Advertisement

ಚಾಮರಾಜನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಐಪಿಎಸ್ ಅಧಿಕಾರಿ ರವಿ ಡಿ‌‌ ಚೆನ್ನಣ್ಣನವರ್ ಬಿಜೆಪಿ ಸೇರ್ಪಡಯಾಗುವ ಸುದ್ದಿಯ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಯಾರು ಬೇಕಾದರೂ ಬಿಜೆಪಿಗೆ ಬರಬಹುದು. ಬಿಜೆಪಿ ತತ್ವ ಸಿದ್ದಾಂತ ಒಪ್ಪಿ ಬರುವವರಿಗೆ ಸ್ವಾಗತ ಎಂದರು.

ರಾಜ್ಯದಲ್ಲಿ ಕೋವಿಡ್ ಪರಿಸ್ಥಿತಿ ಕಂಟ್ರೋಲ್‌ ನಲ್ಲಿದೆ. ಯಾವುದೇ ಕಾರಣಕ್ಕೂ ಲಾಕ್ ಡೌನ್ ಹೇರುವುದಿಲ್ಲ. ಮೂರನೇ ಅಲೆ ಬರಲಿದೆ ಎಂದು ಹೇಳಲಾಗುತ್ತಿದೆ. ಕೋವಿಡ್ ತಡೆಗಟ್ಟಲು ಸಾರ್ವಜನಿಕರ ಸಹಕಾರ ಅತ್ಯಗತ್ಯ. ಕೋವಿಡ್ ಹಾಗೂ ಪ್ರವಾಹ ಪರಿಸ್ಥಿತಿ ನಿರ್ವಹಣೆ ಬಗ್ಗೆ ಉಸ್ತುವಾರಿಗೆ ಸಿಎಂ ಜವಬ್ದಾರಿ ನೀಡಿದ್ದಾರೆ. ಕೋವಿಡ್ ನಿಯಂತ್ರಣ ಹಾಗು ಪ್ರವಾಹ ಪರಿಸ್ಥಿತಿ ನಿರ್ವಹಣೆ ಬಗ್ಗೆ 3-4 ದಿನದಲ್ಲಿ ಸಿಎಂ ಗೆ ವರದಿ ನೀಡಲಾಗುವುದು ಎಂದು ಎಸ್.ಟಿ.ಸೋಮಶೇಖರ್ ಹೇಳಿದರು.

ಇದನ್ನೂ ಓದಿ:‌ಸಚಿವ ಸ್ಥಾನ ಸಿಗದ್ದಕ್ಕೆ ಬೇಸರವಿದೆ,ಸಹಿಸಿಕೊಳ್ಳುವೆ: ಅರವಿಂದ ಬೆಲ್ಲದ

Advertisement

ಚುನಾವಣಾ ರಾಜಕೀಯಕ್ಕೆ ಸಂಸದ ವಿ.ಶ್ರೀನಿವಾಸನಪ್ರಸಾದ್ ವಿದಾಯ ಘೋಷಣೆ ವಿಚಾರದ ಬಗ್ಗೆ ಮಾತನಾಡಿದ ಅವರು, ಶ್ರೀನಿವಾಸ ಪ್ರಸಾದ್ ಹಿರಿಯ ರಾಜಕಾರಣಿ. 50 ವರ್ಷಗಳ ರಾಜಕೀಯದಲ್ಲಿ ಏಳು ಬೀಳು ಕಂಡಿದ್ದಾರೆ. ಅವರು ಕಂದಾಯ ಸಚಿವರಾಗಿದ್ದಾಗ ಬೆಂಗಳೂರಿನಲ್ಲಿ 18 ಕಿಲೋ ಮೀಟರ್ ವ್ಯಾಪ್ತಿ ಸರ್ಕಾರಿ ಭೂಮಿಯನ್ನು ಕ್ರಮಬದ್ಧಗೊಳಿಸುವ ಐತಿಹಾಸಿಕ ಕ್ರಮ ಕೈಗೊಂಡಿದ್ದರು. 94 CC ಕಾಯ್ದೆ ಜಾರಿಗೆ ತಂದು ಬೇಕಾದಷ್ಟು ಜನರಿಗೆ ಅನುಕೂಲ ಮಾಡಿದ್ದಾರೆ. ಆರೋಗ್ಯ ಹಾಗು ವಯಸ್ಸಿನ ದೃಷ್ಟಿಯಿಂದ ತಮ್ಮ ಅವಧಿ ಮುಗಿದ ನಂತರ ಅವರು ಚುನಾವಣಾ ರಾಜಕೀಯದಿಂದ ನಿವೃತ್ತಿ ಆಗಲಿದ್ದಾರೆಂದು ಸಚಿವ ಎಸ್.ಟಿ.ಸೋಮಶೇಖರ್ ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next