Advertisement

ತಮಿಳುನಾಡು ಬಿಜೆಪಿ ಅಭ್ಯರ್ಥಿ, ಮಾಜಿ ಐಪಿಎಸ್ ಅಣ್ಣಾಮಲೈಗೆ ಕೋವಿಡ್, ಆಸ್ಪತ್ರೆಗೆ ದಾಖಲು

10:01 AM Apr 11, 2021 | Team Udayavani |

ಚೆನ್ನೈ: ಮಾಜಿ ಐಪಿಎಸ್ ಅಧಿಕಾರಿ, ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿರುವ ಅಣ್ಣಾಮಲೈ ಅವರಿಗೆ ಕೋವಿಡ್-19 ಸೋಂಕು ದೃಢವಾಗಿದೆ.

Advertisement

ಕೋವಿಡ್ ಪಾಸಿಟಿವ್ ಆಗಿರುವ ಕಾರಣ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಸ್ವತಃ ಅಣ್ಣಾಮಲೈ ಅವರೇ ಟ್ವಿಟ್ಟರ್ ಮೂಲಕ ಈ ವಿಚಾರವನ್ನು ಖಚಿತಪಡಿಸಿದ್ದಾರೆ.

ನನಗೆ ಕೋವಿಡ್ ಪಾಸಿಟಿವ್ ಆಗಿದ್ದು, ಮತ್ತು ಆಸ್ಪತ್ರೆಗೆ ದಾಖಲಾಗಿದ್ದೇನೆ. ಕಳೆದ ಕೆಲ ದಿನಗಳಿಂದ ನನ್ನ ಜೊತೆ ಇದ್ದವರು ಕೋವಿಡ್ ಟೆಸ್ಟ್ ಮಾಡಿಸಿಕೊಳ್ಳಿ ಎಂದು ಅಣ್ಣಾಮಲೈ ಮನವಿ ಮಾಡಿದ್ದಾರೆ.

ಕರ್ನಾಟಕದ ಮಾಜಿ ಐಪಿಎಸ್ ಅಧಿಕಾರಿಯಾಗಿರುವ ಅಣ್ಣಾಮಲೈ ಅವರು ಕಳೆದ ವರ್ಷ ಬಿಜೆಪಿಗೆ ಸೇರ್ಪಡೆಯಾಗಿದ್ದರು. ತಮಿಳುನಾಡು ಬಿಜೆಪಿ ಉಪಾಧ್ಯಕ್ಷರಾಗಿರುವ ಅವರು ಅರಾವಕುರಿಚಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧೆ ನಡೆಸುತ್ತಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next