Advertisement

Tamil Nadu: ಡಿಎಂಕೆ ಸರಕಾರ ಇಳಿಸುವವರೆಗೂ ಚಪ್ಪಲಿ ಧರಿಸಲ್ಲ: ಕೆ.ಅಣ್ಣಾಮಲೈ

01:31 AM Dec 27, 2024 | Team Udayavani |

ಚೆನ್ನೈ: ತಮಿಳುನಾಡಿನಲ್ಲಿ ಡಿಎಂಕೆ ಸರಕಾರ ವನ್ನು ಕೆಳಗಿಳಿಸುವವರೆಗೂ ಪಾದರಕ್ಷೆಗಳನ್ನು ಧರಿಸುವುದಿಲ್ಲ ಎಂದು ಬಿಜೆಪಿ ತಮಿಳುನಾಡು ಅಧ್ಯಕ್ಷ ಕೆ.ಅಣ್ಣಾಮಲೈ ಪ್ರತಿಜ್ಞೆ ಮಾಡಿದ್ದಾರೆ. ಕೊಯಮತ್ತೂರಿನಲ್ಲಿ ಗುರುವಾರ ಮಾತನಾಡಿದ ಅವರು, ಅಣ್ಣಾ ವಿವಿ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಎಫ್ಐಆರ್‌ ಪ್ರತಿಯನ್ನು ಪೊಲೀಸರು ಬಹಿರಂಗಪಡಿಸಿದ್ದಾರೆ.

Advertisement

ಸಂತ್ರಸ್ತರ ಮಾಹಿತಿಗಳೂ ಬಹಿರಂಗಗೊಂಡಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದರು.

“ನಾನು ಈ ಸರಕಾರವನ್ನು ಕೆಳಗಿಳಿಸುವವರೆಗೂ ಚಪ್ಪಲಿ ಹಾಕುವುದಿಲ್ಲ. ಶುಕ್ರವಾರ ನನ್ನ ಮನೆ ಮುಂದೆ ನಿಂತು 6 ಬಾರಿ ನನಗೆ ನಾನೇಚಾಟಿಯಿಂದ ಬಾರಿಸಿಕೊಳ್ಳುತ್ತೇನೆ. ಜತೆಗೆ ಮುಂದಿನ 48 ದಿನಗಳು ಉಪವಾಸ ಕೈಗೊಂಡು, ರಾಜ್ಯದಲ್ಲಿರುವ ಮುರುಗನ್‌ನ 6 ಪವಿತ್ರ ಕ್ಷೇತ್ರಗಳಿಗೆ ಭೇಟಿ ನೀಡುತ್ತೇನೆ’ ಎಂದಿದ್ದಾರೆ.

ರಾಜ್ಯದಲ್ಲಿ ಇನ್ನು ಸಾರ್ವಜನಿಕರು ಪ್ರತಿಭಟನೆ ನಡೆಸುವುದಿಲ್ಲ. ಹೀಗೆ ಆದಾಗೆಲ್ಲಾ ಪ್ರತಿಭಟನಾ ನಿರತ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿ, ಒಂದೆಡೆ ಕೂಡುತ್ತಾರೆ. ಹಾಗಾಗಿ ಇನ್ನು ಮುಂದೆ ಕಾರ್ಯಕರ್ತರು ಅವರ ಮನೆ ಮುಂದೆಯೇ ಪ್ರತಿಭಟನೆ ನಡೆಸುತ್ತಾರೆ. ಎಂದರು.

Advertisement

Udayavani is now on Telegram. Click here to join our channel and stay updated with the latest news.

Next