ವೇಣೂರು: ದೈಹಿಕ ಮತ್ತು ಮಾನಸಿಕ ಬೆಳವಣಿಗೆಗೆ ಎನ್ನೆಸ್ಸೆಸ್ ಶಿಬಿರಗಳು ಪೂರಕ ಎಂದು ಪೆರಿಂಜೆ ಶ್ರೀ ಕ್ಷೇತ್ರ ಪಡ್ದ್ಯಾರಬೆಟ್ಟದ ಆನುವಂಶೀಯ ಧರ್ಮದರ್ಶಿ ಎ. ಜೀವಂಧರ ಕುಮಾರ್ ಹೇಳಿದರು.ಪೆರಿಂಜೆ ಪಡ್ದ್ಯಾರಬೆಟ್ಟದ ಸಂತೃಪ್ತಿ ಸಭಾಭವನದಲ್ಲಿ ಶನಿವಾರ ಜರಗಿದ ಮೂಡಬಿದಿರೆ ಶ್ರೀ ಮಹಾವೀರ ಕಾಲೇಜು ರಾಷ್ಟ್ರೀಯ ಸೇವಾ ಯೋಜನೆ (ಎನ್ನೆಸ್ಸೆಸ್)ಯ ವಾರ್ಷಿಕ ವಿಶೇಷ ಶಿಬಿರದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.
ಶ್ರೀ ಮಹಾವೀರ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಪ್ರೊ| ರಮೇಶ್ ಭಟ್ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ನಾರಾವಿ ಜಿ.ಪಂ. ಸದಸ್ಯ ಪಿ. ಧರಣೇಂದ್ರ ಕುಮಾರ್ ಮಾತನಾಡಿ, ಜೀವನದ ಕಠಿಣ ಸವಾಲುಗಳನ್ನು ಎದುರಿಸಲು ಎನ್ನೆಸ್ಸೆಸ್ ಸ್ಫೂರ್ತಿ. ಶಿಬಿರದಲ್ಲಿ ಪಂಚಾಯತ್ ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯ ಮಾಹಿತಿಯನ್ನು ಅರಿತುಕೊಳ್ಳಬೇಕು ಎಂದರು. ಕಾಲೇಜಿನ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷ ಕೆ. ಅಬ್ದುಲ್ ರಹಿಮಾನ್ ಮಾತನಾಡಿದರು.
ಹೊಸಂಗಡಿ ಗ್ರಾ.ಪಂ. ಅಧ್ಯಕ್ಷೆ ಹೇಮಾ ವಸಂತ್, ಬೆಳ್ತಂಗಡಿ ತಾ.ಪಂ. ಸದಸ್ಯ ಓಬಯ್ಯ ಆರಂಬೋಡಿ, ಮೂಡಬಿದಿರೆಯ ಸರೋಜಾ ಜಿ. ಜೈನ್, ಪೆರಿಂಜೆ ಶ್ರೀಪದ್ಮ ಕ್ಯಾಶ್ಯೂ ಇಂಡಸ್ಟ್ರೀಸ್‌ನ ವಿಕಾಸ್ ಜೈನ್, ಹೊಸಂಗಡಿ ಗ್ರಾ.ಪಂ. ಮಾಜಿ ಅಧ್ಯಕ್ಷ ಹರಿಪ್ರಸಾದ್ ಪಿ., ಶಿಬಿರದ ವಿದ್ಯಾರ್ಥಿ ಕ್ಷೇಮಪಾಲನ ಅಧಿಕಾರಿ ಹರೀಶ್, ಶಿಬಿರಾಧಿಕಾರಿ ಸಂದೀಪ್ ಶೆಟ್ಟಿ, ಶಿಬಿರದ ನಾಯಕರಾದ ಶೈಲೇಶ್, ತೇಜಸ್, ಚೈತ್ರಾ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಶಿಬಿರಾಧಿಕಾರಿ ಗೀತಾ ರಾಮಕೃಷ್ಣ ಸ್ವಾಗತಿಸಿ, ಪ್ರಸ್ತಾವಿಸಿದರು. ವಸುಧಾ ಕಾರ್ಯಕ್ರಮ ನಿರ್ವಹಿಸಿ, ಘಟಕದ
ನಾಯಕಿ ಶ್ವೇತಾ ಎಂ. ಪೈ ವಂದಿಸಿದರು. ಜೀವನಮಟ್ಟ ಸುಧಾರಣೆ ಸಾಮಾಜಿಕವಾಗಿ ವಿದ್ಯಾರ್ಥಿಗಳ
ಜೀವನಮಟ್ಟವನ್ನು ಸುಧಾರಿಸಲು ಪ್ರೋತ್ಸಾಹ ನೀಡುವ ಉದ್ದೇಶ ಎನ್ನೆಸ್ಸೆಸ್ ಶಿಬಿರಗಳಲ್ಲಿ ಅಡಗಿದೆ.
–
ಪಿ. ಧರಣೇಂದ್ರ ಕುಮಾರ್,
ಜಿ.ಪಂ. ಸದಸ್ಯರು