Advertisement

ವಲಸೆ ಕಾರ್ಮಿಕರಿಗೆ ಪ್ಯಾಕೇಜ್‌ ಘೋಷಿಸಿ

07:14 AM Jun 05, 2020 | Lakshmi GovindaRaj |

ಚಿಕ್ಕಬಳ್ಳಾಪುರ: ವಲಸೆ ಕಾರ್ಮಿಕರಿಗೆ ಕೇಂದ್ರ, ರಾಜ್ಯ ಸರ್ಕಾರಗಳು ವಿಶೇಷ ಆರ್ಥಿಕ ಪ್ಯಾಕೇಜ್‌ ಘೋಷಿಸಿ ಲಾಕ್‌ಡೌನ್‌ ಸಂದರ್ಭದಲ್ಲಿ ಅಪಘಾತ, ಹಸಿವು ಹಾಗೂ ಆತ್ಮಹತ್ಯೆ ಮಾಡಿಕೊಂಡ ಕಾರ್ಮಿಕರಿಗೆ ಗರಿಷ್ಠ ಪರಿಹಾರ  ನೀಡಬೇಕೆಂದು ಆಗ್ರಹಿಸಿ ಗುರುವಾರ ನಗರದ ಉಪ ವಿಭಾಗಾಧಿಕಾರಿಗಳ ಕಚೇರಿ ಮುಂದೆ ಪ್ರಾಂತ ಕೃಷಿ ಕೂಲಿಕಾರರ ಸಂಘದ ಕಾರ್ಯಕರ್ತರು ಧರಣಿ ನಡೆಸಿದರು.

Advertisement

ಉಪ ವಿಭಾಗಾಧಿಕಾರಿಗಳ ಕಚೇರಿ ಮುಂದೆ ಜಿಲ್ಲೆಯ ಕೃಷಿ ಕೂಲಿಕಾರರ  ಸಮಸ್ಯೆಗಳ ಪರಿಹಾರಕ್ಕೆ ಆಗ್ರಹಿಸಿ ಪ್ರತಿಭಟನಾ ಧರಣಿ ನಡೆಸಿದ ಕೂಲಿಕಾರರು, ಲಾಕ್‌ಡೌನ್‌ ಸಂಕಷ್ಟದಲ್ಲಿರುವ ಕಾರ್ಮಿಕರಿಗೆ ಖಾತ್ರಿ ಯೋಜನೆಯಡಿ 200 ದಿನ ಕೂಲಿ ಕೊಡಬೇಕು, ಯೋಜನೆಗೆ ಕೇಂದ್ರ ಸರ್ಕಾರ ಇನ್ನಷ್ಟು ಪರಿಹಾರ  ನೀಡಬೇಕೆಂದರು.

ಆಹಾರ ಪದಾರ್ಥ ನೀಡಲಿ: ಕಾರ್ಮಿಕರ ರಕ್ಷಣೆ ಮಾಡುವ ಕಾನೂನುಗಳನ್ನು ಮರಳಿ ಜಾರಿಗೆ ತರಬೇಕು, ಗ್ರಾಮೀಣ ಭಾಗದಲ್ಲಿ ನಾಗರಿಕರಿಗೆ ಉಚಿತ ಆರೋಗ್ಯ ತಪಾಸಣೆ ಮಾಡಬೇಕು, ಪ್ರತಿ ಕೂಲಿ ಕುಟುಂಬಕ್ಕೆ ಮುಂದಿನ 6 ತಿಂಗಳಿಗೆ ತಲಾ  10 ಕೆ.ಜಿ.ಅಕ್ಕಿ, ಗೋಧಿ ಮತ್ತಿತರ ಆಹಾರ ಪದಾರ್ಥಗಳನ್ನು ಉಚಿತವಾಗಿ ನೀಡಬೇಕೆಂದು ಕೇಂದ್ರ, ರಾಜ್ಯ ಸರ್ಕಾರಗಳನ್ನು ಆಗ್ರಹಿಸಿ ಉಪ ವಿಭಾಗಾಧಿಕಾರಿಗಳ ಮೂಲಕ ಮನವಿ ಸಲ್ಲಿಸಿದರು.

ಪ್ರತಿಭಟನೆಯಲ್ಲಿ ಪ್ರಾಂತ ರೈತ ಸಂಘದ  ಜಿಲ್ಲಾಧ್ಯಕ್ಷ ಬಿ.ಎನ್‌.ಮುನಿಕೃಷ್ಣಪ್ಪ, ಪದಾಧಿಕಾರಿಗಳಾದ ಕೆ.ಆರ್‌. ಮಂಜುಳಾ, ಬಸವರಾಜ್‌, ದೊಡ್ಡನರಸಿಂಹಪ್ಪ, ಶಾಂತಮ್ಮ, ವೆಂಕಟಮ್ಮ, ಮುನಿಯಪ್ಪ ಪಾಲ್ಗೊಂಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next