ಕಲಬುರಗಿ: ಕೋಟ್ಪಾ ಕಾಯ್ದೆ-2003ರ ಪ್ರಕಾರಶೈಕ್ಷಣಿಕ ಸಂಸ್ಥೆಗಳ ಸುತ್ತಮುತ್ತ 100 ಮೀಟರ್ ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವುದು ಅಪರಾಧವಾಗಿದ್ದು, ನಗರ-ಸ್ಥಳೀಯ ಸಂಸ್ಥೆಗಳ ಸಹಕಾರದೊಂದಿಗೆ ಎಲ್ಲ ಶಿಕ್ಷಣ ಸಂಸ್ಥೆಗಳನ್ನು ತಂಬಾಕು ಮುಕ್ತ ಸಂಸ್ಥೆಗಳನ್ನಾಗಿಘೋಷಿಸಬೇಕು ಎಂದು ಹೆಚ್ಚುವರಿ ಜಿಲಾಧಿಕಾರಿಡಾ| ಶಂಕರ ವಣಿಕ್ಯಾಳ ಹೇಳಿದರು.
ಗುರುವಾರ ತಮ್ಮ ಕಚೇರಿಯಲ್ಲಿ ಜಿಲ್ಲಾ ತಂಬಾಕು ನಿಷೇಧ ಕೋಶದ ಸಭೆಯಲ್ಲಿಮಾತನಾಡಿದ ಅವರು, ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಅಧಿ ನಿಯಮ-2003ರ ಕಾನೂನನ್ನುಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ, ಸಾಮರ್ಥ್ಯ, ಅಭಿವೃದ್ಧಿ, ಮೇಲ್ವಿಚಾರಣೆ ಕುರಿತುತಂಬಾಕು ನಿಯಂತ್ರಣ ಅಧಿ ಕಾರಿಗಳಿಗೆ ನಿರ್ದೇಶನ ನೀಡಿದರು. ವಿಶ್ವದಾದ್ಯಂತ ಅಂದಾಜು 60 ಲಕ್ಷಕಿಂತ ಹೆಚ್ಚು ಜನರು ತಂಬಾಕು ಸೇವನೆಯಿಂದ ಉಂಟಾಗುವ ಕಾಯಿಲೆಗಳಿಂದ ಮರಣ ಹೊಂದುತ್ತಿದ್ದಾರೆ. ತಂಬಾಕು ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಹಲವಾರು ಕಟ್ಟುನಿಟ್ಟಿನ ಕಾಯ್ದೆಗಳನ್ನು ತಂದರೂ ಸಾರ್ವಜನಿಕರಿಗೆ ಅರಿವು ಇಲ್ಲದಂತಾಗಿದೆ. ಹೆಚ್ಚಿನ ಅರಿವು ಮೂಡಿಸಲು ಅಧಿಕಾರಿಗಳು ಪ್ರಯತ್ನಿಸಬೇಕು ಎಂದರು.
ತಂಬಾಕು ನಿಯಂತ್ರಣ ನಿಟ್ಟಿನಲ್ಲಿ ತಾಲೂಕು ಆರೋಗ್ಯ ಅಧಿಕಾರಿಗಳು ಮತ್ತು ತಹಶೀಲ್ದಾರ್ ನೇತೃತ್ವದಲ್ಲಿ ಪೌರ ಸಂಸ್ಥೆ, ಶಿಕ್ಷಣ, ಪೊಲೀಸ್ ಹಾಗೂ ಕಾರ್ಮಿಕರ ಇಲಾಖೆಗಳ ಅಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆ ಸದಸ್ಯರನ್ನು ಹೊಂದಿರುವ ಸಮಿತಿಯು ತ್ರೆ„ಮಾಸಿಕ ಸಭೆಯನ್ನು ತಾಲೂಕು ಮಟ್ಟದಲ್ಲಿ ನಡೆಸಿ ಪರಿಶೀಲನೆ ನಡೆಸಬೇಕು. ಪ್ರತಿ ಮಂಗಳವಾರ ತಂಬಾಕು ತನಿಖಾ ದಳದ ಸದಸ್ಯರೊಂದಿಗೆ ಸಭೆ ನಡೆಸಿ, ಕೋಟ್ಪಾ ಕಾಯ್ದೆ ಉಲ್ಲಂಘನೆಯಾದಲ್ಲಿ ಸಂಬಂಧಪಟ್ಟವರ ವಿರುದ್ಧ ಕ್ರಮಕೈಗೊಂಡು ದಂಡ ವಿಧಿಸುವುದಲ್ಲದೇ, ದೂರು ದಾಖಲಿಸಬೇಕು ಎಂದು ಡಾ| ಶಂಕರ ವಣಿಕ್ಯಾಳ ತಿಳಿಸಿದರು.
ರಾಜ್ಯ ತಂಬಾಕು ನಿಯಂತ್ರಣ ಘಟಕದ ವಿಭಾಗೀಯ ಸಂಯೋಜಕ ಮಹಾಂತೇಶ ಉಳ್ಳಾಗಡ್ಡಿ ಮಾತನಾಡಿ, ಕೋಟ್ಪಾ ಕಾಯ್ದೆ ಸೆಕ್ಷನ 4ರ ಪ್ರಕಾರ ಸಾರ್ವಜನಿಕ ಸ್ಥಳದಲ್ಲಿ ಆಹಾರ ಮಾರಾಟ ಮಾಡುವ ಅಂಗಡಿಗಳಲ್ಲಿ (ಬೇಕರಿ, ಹೋಟಲ್, ಇತ್ಯಾದಿ) ತಂಬಾಕು ಮತ್ತು ಧೂಮಪಾನ ಮಾಡುವಂತಿಲ್ಲ ಎಂದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ| ರಾಜಶೇಖರ ಮಾಲಿ, ಜಿಲ್ಲಾ ಸಮೀಕ್ಷಣಾಧಿಕಾರಿ ಡಾ| ಶಿವಕುಮಾರ ದೇಶಮುಖ, ಮಹಾನಗರ ಪಾಲಿಕೆ ಆರೋಗ್ಯಾಧಿಕಾರಿ ಡಾ| ವಿನೋದ, ಜಿಲ್ಲಾ ತಂಬಾಕು ನಿಷೇಧ ಕೋಶದ ಜಿಲ್ಲಾ ಸಲಹೆಗಾರರಾದ ಸುಜಾತಾ ಪಾಟೀಲ, ಡಿಇಒ ರವಿ ಎಂ., ಕಾರ್ಯಕರ್ತೆ ಆರತಿ ಎಂ., ತಾಲೂಕಿನ ವೈದ್ಯಾಧಿಕಾರಿಗಳು, ಪೌರ ಸಂಸ್ಥೆಗಳ ಮುಖ್ಯಸ್ಥರು ಮತ್ತು ಇತರರು ಹಾಜರಿದ್ದರು.