Advertisement

Election: ಮಾ.14 ಅಥವಾ 15ಕ್ಕೆ ಲೋಕ ಚುನಾವಣೆ ದಿನಾಂಕ ಘೋಷಣೆ?

10:52 PM Mar 05, 2024 | Team Udayavani |

ನವದೆಹಲಿ: ಬಹು ನಿರೀಕ್ಷಿತ ಲೋಕಸಭೆ ಚುನಾವಣಾ ದಿನಾಂಕ ಮಾ.14 ಅಥವಾ 15ರಂದು ಘೋಷಣೆ ಆಗುವ ಸಾಧ್ಯತೆಗಳಿವೆ. ತಕ್ಷಣದಿಂದಲೇ ಮಾದರಿ ನೀತಿ ಸಂಹಿತೆ ಜಾರಿಯಾಗಲಿದೆ ಎಂದು ಮೂಲಗಳು ಹೇಳಿವೆ. ಏಪ್ರಿಲ್‌-ಮೇನಲ್ಲಿ ಒಟ್ಟು 7 ಹಂತಗಳಲ್ಲಿ ಮತದಾನ ನಡೆಯುವ ಸಾಧ್ಯತೆಗಳಿವೆ ಎನ್ನಲಾಗಿದೆ.

Advertisement

2019ರಲ್ಲೂ ದೇಶದಲ್ಲಿ 7 ಹಂತಗಳಲ್ಲಿ ಲೋಕಸಭೆಗೆ ಚುನಾವಣೆ ನಡೆದಿತ್ತು. ಆಗ ಬಿಜೆಪಿ ಏಕಾಂಗಿಯಾಗಿ 303 ಸ್ಥಾನಗಳನ್ನು ಗೆದ್ದಿತ್ತು. ಕಾಂಗ್ರೆಸ್‌ ಕೇವಲ 52 ಸ್ಥಾನಗಳನ್ನು ಗೆದ್ದಿದೆ. ಈ ಬಾರಿ ಬಿಜೆಪಿ ಈಗಾಗಲೇ 195 ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ್ದು, ಪ್ರಧಾನಿ ಮೋದಿ ವಾರಾಣಸಿಯಿಂದ ಸ್ಪರ್ಧೆ ಮಾಡಲಿದ್ದಾರೆ. ಜತೆಗೆ ಬಿಜೆಪಿಯೊಂದೇ 370 ಸ್ಥಾನ ಗೆಲ್ಲುವ ಗುರಿಯನ್ನು ಹಾಕಿಕೊಂಡಿದೆ. ಸಾರ್ವತ್ರಿಕ ಚುನಾವಣೆ ವೇಳೆಯೇ ಐಪಿಎಲ್‌ ಪಂದ್ಯಾವಳಿ ನಡೆಯಲಿದೆ.

Advertisement

Udayavani is now on Telegram. Click here to join our channel and stay updated with the latest news.

Next