ಭದ್ರಾವತಿ: ಅತಿ ಸೂಕ್ಷ್ಮ ಪ್ರದೇಶದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸರು ದಿನದ 24 ಗಂಟೆ ಸಹ ಎಚ್ಚರಿಕೆ ವಹಿಸಬೇಕಾಗಿದೆ. ಇದರಿಂದಾಗಿ ಕುಟುಂಬದೊಂದಿಗೆ ಹೆಚ್ಚಿನ ಸಮಯ ಕಳೆಯಲು ಸಾಧ್ಯವಾಗುತ್ತಿಲ್ಲ. ಅದರೂ ಸಹ ಅಲ್ಪಸ್ವಲ್ಪ ಬಿಡುವಿನಲ್ಲಿ ಕುಟುಂಬದ ಸದಸ್ಯರ ಬಗ್ಗೆ ಕಾಳಜಿ ವಹಿಸುವ ಮೂಲಕ ಕುಟುಂಬದಲ್ಲೂ ನೆಮ್ಮದಿ ವಾತಾವರಣ ರೂಪಿಸಿಕೊಳ್ಳಬೇಕಾಗಿದೆ ಎಂದು ತಹಶೀಲ್ದಾರ್ ಆರ್. ಪ್ರದೀಪ್ ಹೇಳಿದರು.
ಭಾನುವಾರ ನಗರದ ನ್ಯೂಟೌನ್ ವಿಐಎಸ್ ಎಲ್ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಪೊಲೀಸ್ ಕುಟುಂಬದ ವಾರ್ಷಿಕ ಕ್ರೀಡಾಕೂಟ ಉದ್ಘಾಟಿಸಿ ಅವರು ಮಾತನಾಡಿದರು. ಸರ್ಕಾರದ ಇತರೆ ಇಲಾಖೆಗಳಿಗೆ ಹೋಲಿಸಿದಲ್ಲಿ ಪೊಲೀಸ್ ಇಲಾಖೆಯವರು ಹೆಚ್ಚಿನ ಸಮಯ ಕರ್ತವ್ಯಕ್ಕೆ ಮೀಸಲಿಡಬೇಕಾಗಿದೆ. ಅದರಲ್ಲೂ ಭದ್ರಾವತಿ ಕ್ಷೇತ್ರದಂತಹ ಸೂಕ್ಷ್ಮ ಪ್ರದೇಶದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸರು ಹೆಚ್ಚಿನ ಒತ್ತಡಕ್ಕೆ ಒಳಗಾಗುವಂತಾಗಿದೆ.
ಇಲ್ಲಿನ ರಾಜಕೀಯ ಹಾಗು ಸಾಮಾಜಿಕ ವ್ಯವಸ್ಥೆಗಳಿಗೆ ಹೊಂದಿಕೊಂಡು ಹೋಗಬೇಕಾಗಿದೆ. ಇಂತಹ ಪರಿಸ್ಥಿತಿಯಲ್ಲಿ ಕುಟುಂಬ ಸದಸ್ಯರೊಂದಿಗೆ ನೆಮ್ಮದಿಯಿಂದ ಕಾಲ ಕಳೆಯಲು ಸಾಧ್ಯವಾಗ ದಿರುವುದು ವಿಪರ್ಯಾಸದ ಸಂಗತಿಯಾಗಿದೆ ಎಂದರು. ಐಪಿಎಸ್ ಅ ಧಿಕಾರಿ ಉಪ ವಿಭಾಗದ ಪೊಲೀಸ್ ಉಪ ಅ ಧೀಕ್ಷಕ ಜಿತೇಂದ್ರಕುಮಾರ್ ದಯಾಮಾ ಅಧ್ಯಕ್ಷತೆ ವಹಿಸಿದ್ದರು.
ಪ್ರೊಫೆಷನರಿ ಐಪಿಎಸ್ ಅಧಿ ಕಾರಿ ಗಜಾನನ ಸುತಾರಾ, ಹೊಳೆಹೊನ್ನೂರು ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ಲಕ್ಷಿ ¾àಪತಿ, ಗ್ರಾಮಾಂತರ ವೃತ್ತ ನಿರೀಕ್ಷಕ ಚೈತನ್ಯ ಇನ್ನಿತರರು ಇದ್ದರು. ಕಾಗದ ನಗರ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ಇ.ಒ. ಮಂಜುನಾಥ್ ಸ್ವಾಗತಿಸಿದರು. ನಗರ ವತ್ತ ನಿರೀಕ್ಷಕ ರಾಘವೇಂದ್ರ ಕಾಂಡಿಕೆ ವಂದಿಸಿದರು.