Advertisement
ವಿದ್ಯಾರ್ಥಿಗಳು ಮನೆಯಲ್ಲಿ ಓದಿನ ಕಡೆಗೆ ಹೆಚ್ಚಿನ ಗಮನಕೊಡಬೇಕು. ಎಲ್ಲ ವಿದ್ಯಾರ್ಥಿಗಳು ಪ್ರತಿಭಾ ಪುರಸ್ಕಾರ ಪಡೆಯುವಂತಾಗಬೇಕು. ಯಾವುದೇ ಕೆಟ್ಟ ಕೆಲಸಕ್ಕೆ ಹೋಗದೆ ಉತ್ತಮ ಗುಣವುಳ್ಳವರಾಗಿ ಸಂಘಕ್ಕೆ ಮತ್ತು ಸಮಾಜಕ್ಕೆ ಉತ್ತಮ ಕೊಡುಗೆ ನೀಡುವವರಾಗಬೇಕೆಂದು ಹೇಳಿದರು. ತಾ| ಬಿಲ್ಲವ ಸಂಘದ ಜತೆ ಕಾರ್ಯದರ್ಶಿ ಸದಾನಂದ ಕುಮಾರ್, ಉಪ್ಪಿನಂಗಡಿ ಮೂರ್ತೆದಾರರ ಸಹಕಾರ ಸಂಘದ ಅಧ್ಯಕ್ಷ ಜನಾರ್ದನ ಬಾಣಜಾಲು, ನೆಲ್ಯಾಡಿ ವಲಯ ಸಂಚಾಲಕ ಚಂದ್ರಶೇಖರ ಬಾಣಜಾಲು ಶುಭಹಾರೈಸಿದರು.
ಸಂಘದ ಕಾರ್ಯದರ್ಶಿ ಮೋಹನ್ ಕುಮಾರ್ ಹಾಗೂ ಪ್ರೇಮಾ ದಂಪತಿಯನ್ನು ಸಮ್ಮಾನಿಸಲಾಯಿತು. ಅಂಗನವಾಡಿ ಮಕ್ಕಳಿಂದ ಪದವಿ ತನಕದ ಮಕ್ಕಳಿಗೆ ಉಚಿತ ಪುಸ್ತಕ ನೀಡಿ ಸಹಕರಿಸಿದ ನೆಲ್ಯಾಡಿ ಗುರುಕೃಪಾ ಹೋಟೆಲ್ ನ ಮಾಲಕ ಕುಶಾಲಪ್ಪ ಕೋಟ್ಯಾನ್ ಅವರನ್ನು ಸಭೆಯಲ್ಲಿ ಅಭಿನಂದಿಸಲಾಯಿತು. ಗ್ರಾಮ ಸಮಿತಿ ಅಧ್ಯಕ್ಷ ಡಾ| ಸದಾನಂದ ಕುಂದರ್ ಸ್ವಾಗತಿಸಿದರು. ಮೋಹನ್ ಕುಮಾರ್ ವಂದಿಸಿದರು. ದೀಪ್ತಿ ನಿರೂಪಿಸಿದರು.